ಗದಗ

ಉದ್ಯೋಗ ಪಡೆಯುವುದಷ್ಟೇ ಅಲ್ಲ, ಉದ್ಯೋಗ ಸೃಷ್ಟಿಸುವ ಕೌಶಲ ಬೆಳೆಸಿಕೊಳ್ಳಿ

ಉದ್ಯೋಗ ಪಡೆಯುವುದಷ್ಟೇ ಅಲ್ಲ, ಉದ್ಯೋಗ ಸೃಷ್ಟಿಸುವ ಕೌಶಲ ಬೆಳೆಸಿಕೊಳ್ಳಿ
Udyōga paḍeyuvudaṣṭē alla, udyōga sr̥ṣṭisuva kauśala beḷesikoḷḷi

ಲೋಕದರ್ಶನ ವರದಿ  

ಉದ್ಯೋಗ ಪಡೆಯುವುದಷ್ಟೇ ಅಲ್ಲ, ಉದ್ಯೋಗ ಸೃಷ್ಟಿಸುವ ಕೌಶಲ ಬೆಳೆಸಿಕೊಳ್ಳಿ  

ಗದಗ, ಸೆ. 12: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಶೈಕ್ಷಣಿಕ ಜ್ಞಾನ ಹೊಂದಿರುವುದು ಸಾಕಾಗುವುದಿಲ್ಲ. ವಿದ್ಯಾರ್ಥಿಗಳು ಉದ್ಯೋಗ ಕೌಶಲ್ಯ, ಸಂವಹನ ಕೌಶಲ್ಯ, ಸಮಯ ನಿರ್ವಹಣೆ, ನಾಯಕತ್ವ ಗುಣ, ಸಮಸ್ಯೆ ಪರಿಹರಿಸುವ ಸಾಮರ್ಥ್ಯ, ಆತ್ಮವಿಶ್ವಾಸ ಹಾಗೂ ಸಂದರ್ಶನ ಎದುರಿಸುವ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಧಾರವಾಡದ ವೃತ್ತಿ ಮಾರ್ಗದರ್ಶಕ ಮಲ್ಲಿಕಾರ್ಜುನ ಒಡೆಯರ ಹೇಳಿದರು.  

ಕೆಎಲ್‌ಇ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಗದಗದಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಉದ್ಯೋಗಾವಕಾಶಗಳು ಹಾಗೂ ವೃತ್ತಿಜೀವನದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಿದ್ದ ವಿಶೇಷ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.  

ವಿದ್ಯಾರ್ಥಿಗಳು ತಮ್ಮ ಆಸಕ್ತಿ, ಸಾಮರ್ಥ್ಯ ಹಾಗೂ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಸೂಕ್ತ ವೃತ್ತಿಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬೇಕು. ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ಲಭ್ಯವಿರುವ ವಿವಿಧ ಉದ್ಯೋಗಾವಕಾಶಗಳು, ಸ್ಪರ್ಧಾತ್ಮಕ ಪರೀಕ್ಷೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯೋಗಕ್ಕೆ ಅಗತ್ಯವಾದ ಸಿದ್ಧತೆಗಳ ಕುರಿತು ಸಮಗ್ರವಾಗಿ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.  

ವಿದ್ಯಾರ್ಥಿಗಳು ಕೇವಲ ಉದ್ಯೋಗ ಹುಡುಕುವವರಾಗುವುದಕ್ಕಿಂತ ಉದ್ಯೋಗ ಸೃಷ್ಟಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಅವರು ಹೇಳಿದರು.  

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಎಲ್‌ಇ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎ.ಕೆ. ಮಠ ವಹಿಸಿದ್ದರು.  

ಕಾರ್ಯಕ್ರಮದಲ್ಲಿ ವೃತ್ತಿ ಮಾರ್ಗದರ್ಶಕರಾದ ಶಿವಕುಮಾರ ಅವರು ವಿದ್ಯಾರ್ಥಿಗಳಲ್ಲಿ ವೃತ್ತಿ ಅರಿವು ಮೂಡಿಸುವಲ್ಲಿ ಇಂತಹ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು.  

ವೃತ್ತಿ ಮಾರ್ಗದರ್ಶನ ಘಟಕದ ಸಂಯೋಜಕರಾದ ಶ್ರೀಮತಿ ಗೌರಾ ಯಲಮಲಿ ಹಾಗೂ ಸಮಾಜ ವಿಜ್ಞಾನ ಸಂಘದ ಸಂಯೋಜಕರಾದ ಶ್ರೀ ಚಂದಾಲಿಂಗಪ್ಪ ಹಳ್ಳಿಕೇರಿ ಉಪಸ್ಥಿತರಿದ್ದರು.  

ಕಾರ್ಯಕ್ರಮದ ನಿರೂಪಣೆಯನ್ನು ಕುಮಾರಿ ಭಾಗ್ಯ ಎಸ್‌. ಹುಚ್ಚನಾಯಕರ್ ಅಚ್ಚುಕಟ್ಟಾಗಿ ನಿರ್ವಹಿಸಿದರು. ಕುಮಾರಿ ಸ್ನೇಹಾ ತಳವಾರ ಪ್ರಾರ್ಥನಾ ಗೀತೆ ಪ್ರಸ್ತುತಪಡಿಸಿದರು. ಕುಮಾರಿ ಸಂಗೀತ ಕೆಂಗಾರ್ ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೊನೆಯಲ್ಲಿ ಕುಮಾರಿ ದಿವ್ಯಾ ಡಿ. ವಂದನಾರೆ​‍್ಣ ಸಲ್ಲಿಸಿದರು.  

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿ ಉಪಸ್ಥಿತರಿದ್ದು, ಸಂಪನ್ಮೂಲ ವ್ಯಕ್ತಿಗಳಿಂದ ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಪಡೆದುಕೊಂಡರು.  

ಒಟ್ಟಾರೆ, ವಿದ್ಯಾರ್ಥಿಗಳಲ್ಲಿ ಉದ್ಯೋಗ ಕೌಶಲ್ಯ, ವೃತ್ತಿ ಅರಿವು ಹಾಗೂ ಭವಿಷ್ಯದ ಅವಕಾಶಗಳ ಕುರಿತು ಆತ್ಮವಿಶ್ವಾಸ ಮೂಡಿಸುವಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು. 


ಸುದ್ದಿ ಓದಿ