ಕರವೇ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷರಾಗಿ ಉಗ್ರಾಣ ನೇಮಕ
ಲೋಕದರ್ಶನ ವರದಿ
ಬೀಳಗಿ 26: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಸಂಘಟನೆಯ ರಾಜ್ಯಾಧ್ಯಕ್ಷರಾದ ನಿಂಗರಾಜ್ ಗೌಡ್ರು ರವರ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಾಲಯದಲ್ಲಿ ನಡೆದ ನೇಮಕಾತಿ ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲೆಯ ನೂತನವಾಗಿ ಜಿಲ್ಲಾಧ್ಯಕ್ಷರನ್ನಾಗಿ ಗಂಗಾಧರ್ ಎನ್ ಉಗ್ರಾಣ ರವರನ್ನು ನೇಮಿಸಿ ಆದೇಶ ಮಾಡಿಸಿದ್ದಾರೆ.
ಗಂಗಾಧರ ರವರು ಹಲವಾರು ವರ್ಷಗಳಿಂದ ಕನ್ನಡಪರ ಸಂಘಟನೆಯಲ್ಲಿ ಗುರುತಿಸಿಕೊಂಡು ಸಕ್ರಿಯವಾಗಿ ಸೇವೆ ಸಲ್ಲಿಸುತ್ತ ಬಂದಿದ್ದಾರೆ. ಬಾಗಲಕೋಟೆ ಜಿಲ್ಲಾ ಸಮಿತಿಯ ನೂತನ ಜಿಲ್ಲಾಧ್ಯಕ್ಷರಿಗೆ ಈ ಸಂದರ್ಭದಲ್ಲಿ ರಾಜ್ಯ ಸಮಿತಿಯಿಂದ ಶುಭ ಹಾರೈಸಿ, ಸಂಘಟನೆಯನ್ನು ಬಲಿಷ್ಠ ಗೊಳಿಸಲು ಶ್ರಮಿಸುವಂತೆ ರಾಜ್ಯಾಧ್ಯಕ್ಷರು ಸಲಹೆ ನೀಡಿದರು. ರಾಜ್ಯ ಕಾರ್ಯಾಧ್ಯಕ್ಷ ರಾಮು ತಳವಾರ ಉಪಸ್ಥಿತರಿದ್ದರು.