ಪಿಎಸ್‌ಎ ಕಾಯ್ದೆಯಡಿ ಉಮರ್, ಮೆಹಬೂಬಾ ಬಂಧನ: ಪ್ರಜಾಪ್ರಭುತ್ವದ ಅತ್ಯಂತ್ಯ ಕೆಟ್ಟ ಅಸಹ್ಯ ನಡವಳಿಕೆ- ಪಿ.ಚಿದಂಬರಂ
ನವದೆಹಲಿ, ಫೆ. 7, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಾದ ಉಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರ ಮೇಲೆ ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್ಎ) ಯನ್ನು ಜಾರಿಗೊಳಿಸಿ ಬಂಧಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ಮುಖಂಡರು, ಆರೋಪಗಳಿಲ್ಲದೆ ಬಂಧಿಸುವುದು ಪ್ರಜಾಪ್ರಭುತ್ವದಲ್ಲಿ ಅತ್ಯಂತ ಕೆಟ್ಟ ಅಸಹ್ಯ ನಡವಳಿಕೆಯಾಗಿದೆ ಎಂದು ಶುಕ್ರವಾರ ಟೀಕಿಸಿದ್ದಾರೆ. ಉಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಮತ್ತು ಇತರರ ವಿರುದ್ಧ ಸಾರ್ವಜನಿಕ ಸುರಕ್ಷತಾ ಕಾಯ್ದೆಯನ್ನು ಜಾರಿ ಮಾಡಿರುವುದು ಕ್ರೂರ ಆಘಾತ ಮತ್ತು ವಿನಾಶಕಾರಿ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಸರಣಿ ಟ್ವೀಟ್ ಮಾಡಿದ್ದಾರೆ.
ಆರೋಪಗಳಿಲ್ಲದೆ ಬಂಧಿಸುವುದು ಪ್ರಜಾಪ್ರಭುತ್ವದಲ್ಲಿ ಅತ್ಯಂತ ಕೆಟ್ಟ ಅಸಹ್ಯ ನಡವಳಿಕೆಯಾಗಿದೆ. ಅನ್ಯಾಯದ ಕಾನೂನುಗಳು ಜಾರಿಗೆ ಬಂದಾಗ ಅಥವಾ ಅನ್ಯಾಯದ ಕಾನೂನುಗಳನ್ನು ಜಾರಿಗೊಳಿಸಿದಾಗ, ಜನರು ಶಾಂತಿಯುತವಾಗಿ ಪ್ರತಿಭಟಿಸುವುದಕ್ಕಿಂತ ಬೇರೆ ಯಾವ ಆಯ್ಕೆ ಇದೆ? '' ಎಂದು ಮಾಜಿ ಗೃಹ ಸಚಿವರು ಪ್ರಶ್ನಿಸಿದ್ದಾರೆ.ಅಬ್ದುಲ್ಲಾ ಮತ್ತು ಎಂ.ಎಸ್.ಮುಫ್ತಿ ವಿರುದ್ಧ ಸರ್ಕಾರ ಗುರುವಾರ ಪಿಎಸ್‌ಎ ಜಾರಿ ಮಾಡಿದೆ.1978ರ ಪಿಎಸ್‌ಎ ಎಂಬುದು ಜಮ್ಮು ಮತ್ತು ಕಾಶ್ಮೀರ ಕಾನೂನಾಗಿದ್ದು, ವಿಚಾರಣೆಯಿಲ್ಲದೆ ವ್ಯಕ್ತಿಯನ್ನು ಎರಡು ವರ್ಷಗಳವರೆಗೆ ಬಂಧಿಸಲು ಅಧಿಕಾರಿಗಳಿಗೆ ಅವಕಾಶ ನೀಡುತ್ತದೆ. ಆಗಸ್ಟ್ 5 ರಂದು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಸರ್ಕಾರ ರದ್ದುಗೊಳಿಸಿದಾಗಿನಿಂದ ಉಭಯ ನಾಯಕರು ಕ್ರಿಮಿನಲ್ ಪ್ರೊಸೀಜರ್ ಸೆಕ್ಷನ್ 107 ರ ಅಡಿಯಲ್ಲಿ ಬಂಧನದಲ್ಲಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 