ಕೇಂದ್ರ ಸಚಿವ ಮುರುಘನ್ - ರಾಜ್ಯ ಭೇಟಿ
ಬೆಂಗಳೂರು, ಆ 28 ಕೇಂದ್ರ ಸಮಾಚಾರ ಮತ್ತು ಪ್ರಸಾರ, ಮೀನುಗಾರಿಕೆ ಹಾಗೂ ಪಶುಸಂಗೋಪನೆ ಖಾತೆ ಸಹಾಯಕ ಸಚಿವ ಡಾ. ಎಲ್. ಮುರುಘನ್ ಇಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.
ಇಂದು ಸಂಜೆ ಅವರು ಬೆಂಗಳೂರಿಗೆ ಆಗಮಿಸಲಿದ್ದು, ನಾಳೆ ಮೈಸೂರಿನ ಜೆಎಸ್‌ಎಸ್ ಮಠದಲ್ಲಿ ಸಮುದಾಯ ರೇಡಿಯೋ ಕೇಂದ್ರ ಉದ್ಘಾಟಿಸಲಿದ್ದಾರೆ. ಬಳಿಕ ಅವರು, ಮೈಸೂರು ಆಕಾಶವಾಣಿ ಆವರಣದಲ್ಲಿ ಪ್ರಾದೇಶಿಕ ಜನಸಂಪರ್ಕ ಕಾರ್ಯಾಲಯ ಆಯೋಜಿಸಿರುವ ಆಜಾದಿ ಕಾ ಅಮೃತ್ ಮಹೋತ್ಸವ್ ಛಾಯಾಚಿತ್ರ ಪ್ರದರ್ಶನದಲ್ಲಿ ಪಾಲ್ಗೊಂಡು ನಂತರ ಚೆನ್ನೈಗೆ ಪ್ರಯಾಣ ಬೆಳಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.