ಸಮುದಾಯದ ಅಭಿವೃದ್ಧಿಗೆ ಒಗ್ಗಟ್ಟು ಅಗತ್ಯ: ಅರುಣ ಐಹೊಳೆ

ಸಮುದಾಯದ ಅಭಿವೃದ್ಧಿಗೆ ಒಗ್ಗಟ್ಟು ಅಗತ್ಯ: ಅರುಣ ಐಹೊಳೆ Unity is necessary for community development: Arun Aihole

ಬೆಳಗಾವಿ  29: ಸಮುದಾಯದ ಸರ್ವಾಂಗೀಣ ಅಭಿವೃದ್ಧಿ ಹಾಗೂ ಹಕ್ಕುಗಳ ರಕ್ಷಣೆಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕಾಗಿದೆ ಎಂದು ಶಿವಶರಣ ಮಾದಾರ ಚೆನ್ನಯ್ಯ ಸೇವಾ ಸಮಿತಿ ರಾಜ್ಯ ಉಪಾಧ್ಯಕ್ಷ ಅರುಣ ಐಹೊಳೆ ಹೇಳಿದರು.ನಗರದ ಮಯೂರ ಪ್ರೆಸಿಡೆನ್ಸಿ ಹೋಟೆಲದ ಸಭಾಂಗಣದಲ್ಲಿ ಆಯೋಜಿಸಿದ್ದ ಶ್ರೀ ಮಾದಾರ ಚೆನ್ನಯ್ಯ ಸೇವಾ ಸಮಿತಿ ಬೆಳಗಾವಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘಟನೆಯು ಯಾವುದೇ ವೈಯಕ್ತಿಕ ಅಥವಾ ರಾಜಕೀಯ ಲಾಭಕ್ಕಾಗಿ ಕಾರ್ಯನಿರ್ವಹಿಸುವುದಿಲ್ಲ, ಇದು ಸಂಪೂರ್ಣ ಪಕ್ಷಾತೀತ ವೇದಿಕೆ. ಇಲ್ಲಿ ಜಾತಿ, ಪಕ್ಷ ಹಾಗೂ ವೈಯಕ್ತಿಕ ಭೇದಭಾವಕ್ಕೆ ಅವಕಾಶವಿಲ್ಲ.

ಎಲ್ಲರೂ ಒಂದಾಗಿ ಸಮುದಾಯದ ಏಳಿಗೆಗಾಗಿ ಶ್ರಮಿಸುತ್ತಿದ್ದೇವೆ. ಸಮುದಾಯದ ಅಭಿವೃದ್ಧಿಯೇ ನಮ್ಮ ಮುಖ್ಯ ಉದ್ದೇಶ, ಡಾ. ಮಾದಾರ ಚೆನ್ನಯ್ಯ ಸ್ವಾಮೀಜಿಗಳವರ ಮಾರ್ಗದರ್ಶನದಲ್ಲಿ ಸಮಿತಿಯು ರಾಜ್ಯಾದ್ಯಂತ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.ಜಿಲ್ಲಾ ಮಟ್ಟದಲ್ಲಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಜೊತೆಗೆ, ಸರ್ಕಾರದ ಸೌಲಭ್ಯಗಳನ್ನು ತಳಮಟ್ಟದ ಜನರಿಗೆ ತಲುಪಿಸುವ ಜವಾಬ್ದಾರಿಯನ್ನು ಪದಾಧಿಕಾರಿಗಳು ನಿಷ್ಠೆಯಿಂದ ನಿರ್ವಹಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಅಧ್ಯಕ್ಷೆ ಡಾ.ಹಂಸವೇಣಿ, ನೂತನ ಬೆಳಗಾವಿ ಜಿಲ್ಲಾ ಅಧ್ಯಕ್ಷ ಸಿದ್ದು ಮೇತ್ರಿ, ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಮಹೇಶ ಕರಮಡಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ರಮೇಶ ಮಾದರ, ಶಿವಾನಂದ ಐಹೊಳೆ ಭಾಗವಹಿಸಿದ್ದರು.  ಬೆಳಗಾವಿ ಮಹಿಳಾ ಜಿಲ್ಲಾ ಅಧ್ಯಕ್ಷೆಯನ್ನಾಗಿ ಲಕ್ಷ್ಮೀ ನಾಗನ್ನವರ, ಚಿಕ್ಕೋಡಿ ಜಿಲ್ಲೆಯ ಮಹಿಳಾ ಅಧ್ಯಕ್ಷೆಯಾಗಿ ಲಕ್ಕವ್ವ ಮಂಟೂರ, ಬೆಳಗಾವಿ ಜಿಲ್ಲಾ ಉಪಾಧ್ಯಕ್ಷೆಯನ್ನಾಗಿ ಗೀತಾ ಸನ್ನಕ್ಕಿ, ರಾಯಬಾಗ ಮಂಡಲ ಮಹಿಳಾ ಅಧ್ಯಕ್ಷೆಯಾಗಿ ಭಾರತಿ ಮ?ಶಾಳೆ, ಕುಡಚಿ ಮಂಡಲದ ಅಧ್ಯಕ್ಷೆಯಾಗಿ ರೇಖಾ ಬಂಡಾರಿ, ಗೋಕಾಕ ಮಂಡಲ ಅಧ್ಯಕ್ಷೆಯಾಗಿ ರೇವಕ್ಕ ಅಡಿವೆಪ್ಪ ಮೇತ್ರಿ ಇವರನ್ನು ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳನ್ನಾಗಿ ಆಯ್ಕೆ ಮಾಡಲಾಯಿತು.