ತಂಬಾಕು ವ್ಯಸನದ ಆಕರ್ಷಣೆಯ ಮುಖವಾಡ ತೆರವು: ವ್ಯಸನದ ವಿರುದ್ಧ ಹೋರಾಟಕ್ಕೆ ಯುವಕರಿಗೆ ಕರೆ
Unmasking the allure of tobacco addiction: Call to youth to fight addiction
ತಂಬಾಕು ವ್ಯಸನದ ಆಕರ್ಷಣೆಯ ಮುಖವಾಡ ತೆರವು: ವ್ಯಸನದ ವಿರುದ್ಧ ಹೋರಾಟಕ್ಕೆ ಯುವಕರಿಗೆ ಕರೆ
ಬಳ್ಳಾರಿ 02: ನಗರದಲ್ಲಿ ವಿಶ್ವ ತಂಬಾಕು ಮುಕ್ತ ದಿನಾಚರಣೆ-2026ರ ಅಂಗವಾಗಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ (ವಿಎಸ್‌ಕೆಯುಬಿ) ಬಳ್ಳಾರಿಯ ಸಮಾಜಶಾಸ್ತ್ರ ವಿಭಾಗ, ಭಾರತೀಯ ಸೇವಾ ಸಂಸ್ಥೆ ಹಾಗೂ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ (ಎಫ್‌ಪಿಎಐ) ಬಳ್ಳಾರಿ ಶಾಖೆಯ ಸಹಯೋಗದಲ್ಲಿ ವಿಶ್ವವಿದ್ಯಾಲಯದ ಆವರಣದಲ್ಲಿ “ನಿಕೋಟಿನ್ ಮತ್ತು ತಂಬಾಕು ವ್ಯಸನದ ಆಕರ್ಷಣೆಯ ಮುಖವಾಡವನ್ನು ತೆರವುಗೊಳಿಸಿ: ವ್ಯಸನದ ವಿರುದ್ಧ ಹೋರಾಟ” ಎಂಬ ವಿಷಯದ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಬಳ್ಳಾರಿ ಶಾಖೆಯ ಅಧ್ಯಕ್ಷರಾದ ಟಿ.ಜಿ. ವಿಠ್ಠಲ್ ಅವರು, ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ದಂಧೆ ಹಾಗೂ ತಂಬಾಕು ಬಳಕೆಯ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು. ಯುವಜನತೆ ವ್ಯಸನದ ಜಾಲಕ್ಕೆ ಸಿಲುಕುವುದರಿಂದ ಅವರ ಆರೋಗ್ಯ, ಶಿಕ್ಷಣ ಹಾಗೂ ಭವಿಷ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ವಿವರಿಸಿದರು.ತಮ್ಮ ಜೀವನದ ಅನುಭವಗಳನ್ನು ಹಂಚಿಕೊಂಡ ಅವರು, ವ್ಯಸನವು ವ್ಯಕ್ತಿಯ ಬದುಕನ್ನು ಮಾತ್ರವಲ್ಲದೆ ಕುಟುಂಬ ಹಾಗೂ ಸಮಾಜದ ಮೇಲೆಯೂ ಗಂಭೀರ ಪರಿಣಾಮ ಬೀರುತ್ತದೆ ಎಂದು ಹೇಳಿದರು. ಯುವಕರು ತಮ್ಮ ಜೀವನದ ಗುರಿಗಳತ್ತ ಗಮನಹರಿಸಿ, ಯಾವುದೇ ರೀತಿಯ ಮಾದಕ ವಸ್ತುಗಳು ಮತ್ತು ತಂಬಾಕು ಉತ್ಪನ್ನಗಳಿಂದ ದೂರವಿರಬೇಕು ಎಂದು ಸಲಹೆ ನೀಡಿದರು. “ಯುವಕರೇ, ವ್ಯಸನಮುಕ್ತ ಸಮಾಜ ನಿರ್ಮಾಣದತ್ತ ಹೆಜ್ಜೆ ಹಾಕಿ. ನಿಮ್ಮ ಆರೋಗ್ಯ ಹಾಗೂ ಭವಿಷ್ಯವನ್ನು ಕಾಪಾಡಿಕೊಳ್ಳುವುದು ನಿಮ್ಮ ಕೈಯಲ್ಲಿದೆ” ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಕುಮಾರ್ ಅವರು ಮಾತನಾಡಿ, ಸಮಾಜದ ಅಭಿವೃದ್ಧಿಗೆ ಅಡ್ಡಿಯಾಗುವ ದುಷ್ಪ್ರವೃತ್ತಿಗಳು ಮತ್ತು ಸಾಮಾಜಿಕ ಪಿಡುಗುಗಳ ವಿರುದ್ಧ ಯುವಕರು ಜಾಗೃತರಾಗಬೇಕು ಎಂದು ತಿಳಿಸಿದರು. ಸಮಾಜಶಾಸ್ತ್ರದ ವಿದ್ಯಾರ್ಥಿಗಳು ಸಮಾಜದಲ್ಲಿನ ಸಮಸ್ಯೆಗಳನ್ನು ಗುರುತಿಸಿ, ಅವುಗಳ ಮೂಲ ಕಾರಣಗಳನ್ನು ಅರ್ಥಮಾಡಿಕೊಂಡು, ಜನರಲ್ಲಿ ಅರಿವು ಮೂಡಿಸುವ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದು ಹೇಳಿದರು.ಮಾದಕ ವಸ್ತುಗಳ ಬಳಕೆ, ತಂಬಾಕು ವ್ಯಸನ, ಬಾಲ್ಯ ವಿವಾಹ, ಲಿಂಗ ತಾರತಮ್ಯ ಸೇರಿದಂತೆ ಸಮಾಜವನ್ನು ಕಾಡುತ್ತಿರುವ ವಿವಿಧ ಸಮಸ್ಯೆಗಳ ವಿರುದ್ಧ ವಿದ್ಯಾರ್ಥಿಗಳು ಸಮುದಾಯದೊಂದಿಗೆ ಕೈಜೋಡಿಸಿ ಕೆಲಸ ಮಾಡಬೇಕಾಗಿದೆ. ಸಾಮಾಜಿಕ ಜವಾಬ್ದಾರಿಯುತ ನಾಗರಿಕರಾಗಿ ಹಾಗೂ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರುವ ನಾಯಕರಾಗಿ ರೂಪುಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಅವರು ಕರೆ ನೀಡಿದರು.
ಕಾರ್ಯಕ್ರಮದ ಉದ್ದೇಶ ಮತ್ತು ಮಹತ್ವದ ಕುರಿತು ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಬಳ್ಳಾರಿ ಶಾಖೆಯ ಶಾಖಾ ವ್ಯವಸ್ಥಾಪಕರಾದ ಎಸ್. ವಿಜಯಲಕ್ಷ್ಮಿ ಅವರು ಮಾತನಾಡಿ, ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಬಳಕೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು, ವ್ಯಸನದ ಅಪಾಯಗಳು ಹಾಗೂ ಅವುಗಳ ತಡೆಗೆ ಅಗತ್ಯವಿರುವ ಜಾಗೃತಿಯ ಕುರಿತು ಮಾಹಿತಿ ನೀಡಿದರು. ವಿಶ್ವ ತಂಬಾಕು ಮುಕ್ತ ದಿನಾಚರಣೆಯ ಮಹತ್ವವನ್ನು ವಿವರಿಸಿ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಅಗತ್ಯವನ್ನು ಒತ್ತಿಹೇಳಿದರು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಸಂಪನ್ಮೂಲ ವ್ಯಕ್ತಿಗಳೊಂದಿಗೆ ಸಂವಾದ ನಡೆಸಿ, ತಂಬಾಕು ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳು, ಅವುಗಳಿಂದ ಉಂಟಾಗುವ ಆರೋಗ್ಯ ಹಾಗೂ ಸಾಮಾಜಿಕ ಸಮಸ್ಯೆಗಳು ಮತ್ತು ಅವುಗಳ ತಡೆಗಟ್ಟುವ ಮಾರ್ಗಗಳ ಕುರಿತು ಚರ್ಚಿಸಿದರು.
ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ತಜ್ಞರು ಸಮಗ್ರ ಉತ್ತರಗಳನ್ನು ನೀಡಿದರು.ಜಾಗೃತಿ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ವ್ಯಸನದ ಅಪಾಯಗಳು, ತಂಬಾಕು ಬಳಕೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಹಾಗೂ ಆರೋಗ್ಯಕರ ಜೀವನಶೈಲಿಯ ಮಹತ್ವದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲಾಯಿತು. ಕಾರ್ಯಕ್ರಮವು ಯುವಜನರಲ್ಲಿ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವುದರ ಜೊತೆಗೆ ಆರೋಗ್ಯಕರ ಹಾಗೂ ಜವಾಬ್ದಾರಿಯುತ ಸಮಾಜ ನಿರ್ಮಾಣದ ಸಂದೇಶವನ್ನು ಪರಿಣಾಮಕಾರಿಯಾಗಿ ತಿಳಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 