ಆರಂಭವಾಗದ ಕಾಮಗಾರಿಗಳು ಅಭಿವೃದ್ಧಿ ಕುಂಠಿತ
Unstarted works stunt development
ವರದಿ ಅಬೂಬಕರ ಯಡಹಳ್ಳಿ
ಕೆರೂರ, 23 : ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ಶಾಸಕ ಭೀಮಸೇನ ಚಿಮ್ಮನಕಟ್ಟಿ ಎಸ್ ಎಫ್ ಸಿ ಹಾಗೂ 15ನೇ ಹಣಕಾಸು ಯೋಜನೆ ಅಡಿ ಕೆಲವು ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ನೆರವೇಸಿದರು, ಪಪಂ ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ಕಾಮಗಾರಿಗಳು ಇನ್ನು ಆರಂಭವಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ, 5 ಲಕ್ಷದ ಪಶು ಆಸ್ಪತ್ರೆ ಆವರಣ ಸುಧಾರಣೆ, 13 ಲಕ್ಷ ವೆಚ್ಚದಲ್ಲಿ ಜೈ ಭವಾನಿ ಕಾಲೋನಿ ರಸ್ತೆ ಸುಧಾರಣೆ ಸೇರಿ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿ ಕಾಮಗಾರಿ ಶೀಘ್ರ ಆರಂಭಿಸುವಂತೆ ಸೂಚಿಸಿದರು.
ಕಾಮಗಾರಿಗಳ ಆರಂಭ ವಿಳಂಬಕ್ಕೆ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ರಮೇಶ್ ಮಾಡಬಾಳ ಇಚ್ಛಾಶಕ್ತಿ ಕೊರತೆ ಕಾರಣವಾಗಿದೆ. ನಗರದ ಅಭಿವೃದ್ಧಿಗೆ ಶಾಸಕರು ಶ್ರಮಿಸುತ್ತಿದ್ದಾರೆ, ಅಧಿಕಾರಿಗಳ ಕಾರ್ಯವೈಕರಿ ಅಭಿವೃದ್ಧಿಗೆ ಹಿನ್ನಡೆ ಆಗುತ್ತಿದೆ.ಬಾಕ್ಸ್ ;
ಅನುದಾನ ಇಲ್ಲದೆ ಕಾಮಗಾರಿ ಭೂಮಿ ಪೂಜೆ ಮಾಡಲಾಗಿದೆ, ಈಗಲೇ ಅಧಿಕಾರಿಗಳು ಪೂರ್ಣ ಮಾಡಿದ ಹಳೆಯ ಕಾಮಗಾರಿ ಬಿಲ್ ನೀಡಿದ ಕಾರಣ ಸಂಕಷ್ಟದಲ್ಲಿದ್ದೇವೆ, ಅನುದಾನದ ಹಣ ಬರುತ್ತೋ ಇಲ್ವೋ ಎಂಬ ಭೀತಿಯಲ್ಲಿದ್ದೇವೆ ಹೀಗಾಗಿ ಕಾಮಗಾರಿ ಆರಂಭಿಸಿಲ್ಲ ಎಂದು ಹೆಸರು ಹೇಳಲು ಇಚ್ಚಿಸದ ಗುತ್ತಿಗೆದಾರ ತಿಳಿಸಿದ್ದಾನೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 