ಶಿಗ್ಗಾವ್

ಅಕಾಲಿಕ ಮಳೆ: ರೈತರ ಪರಿಸ್ಥಿತಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ಅಕಾಲಿಕ ಮಳೆ: ರೈತರ ಪರಿಸ್ಥಿತಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ಲೋಕದರ್ಶನ ವರದಿ 

ಶಿಗ್ಗಾವಿ 21: ತಾಲೂಕಿನಲ್ಲಿ ಕಳೆದ 2-3 ದಿನಗಳಿಂದ ಅಕಾಲಿಕವಾಗಿ ಮಳೆ ಸುರಿಯುತ್ತಿದ್ದು ರೈತರ ಪರಿಸ್ಥಿತಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗಿದೆ ಎಂದು ಭಾ.ಜ.ಪ ಯುವ ಮೋರ್ಚಾ ತಾಲೂಕ ಅಧ್ಯಕ್ಷ ಶಿವರಾಜ ರಾಯಣ್ಣವರ ಹೇಳಿದರು. 

ಬಂಕಾಪೂರ ಹೋಬಳಿ ವ್ಯಾಪ್ತಿಯಲ್ಲಿ ಬರುವ ಹೊಟ್ಟುರ, ನಾರಾಯಣಪೂರ, ಇಬ್ರಾಹೀಂಪುರ, ಬಾಡ, ಕಲ್ಯಾಣ, ಸಿಂಗಾಪೂರ, ಹುಣಸೀಕಟ್ಟೀ ಗ್ರಾಮದ ಹೊಲಗಳಲ್ಲಿ ಬೆಳೆ ಹಾನಿಯಾಗಿರುವುದನ್ನು ಸಂಬಂಧಪಟ್ಟ ಬಂಕಾಪೂರ ಕಂದಾಯ ನೀರೀಕ್ಷಕರು, ಕೃಷಿ ಅಧಿಕಾರಿಗಳು, ಗ್ರಾಮಲೆಕ್ಕಾದಿಕಾರಿಗಳ ಮೂಲಕ ವೀಕ್ಷಣೆ ಮಾಡಿ ಅಧಿಕಾರಿಗಳಿಗೆ ಸೂಕ್ತ ರೀತಿಯಲ್ಲಿ ಸರಕಾರಕ್ಕೆ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಮನವಿ ಮಾಡಲಾಯಿತು. 

ಈ ಸಂದರ್ಭದಲ್ಲಿ ಮಾಜಿ ಜಿ.ಪಂ. ಸದಸ್ಯ ಶಶೀಧರ ಹೊನ್ನಣ್ಣವರ, ಮಾಜಿ.ಗ್ರಾ.ಪಂ. ಅಧ್ಯಕ್ಷ ಉಮೇಶ ಅಂಗಡಿ, ಗ್ರಾ.ಪಂ. ಉಪಾಧ್ಯಕ್ಷ ಸಿದ್ದಲಿಂಗೇಶ ಕಲಿವಾಳ ಸೇರಿದಂತೆ ಗ್ರಾಮಸ್ಥರು, ಮುಖಂಡರು ಉಪಸ್ಥಿತರಿದ್ದರು. 


ಸುದ್ದಿ ಓದಿ