ಗದಗ ಜಿಲ್ಲೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್‌. ಫಣೀಂದ್ರ ಭೇಟಿ

ಗದಗ ಜಿಲ್ಲೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್‌. ಫಣೀಂದ್ರ ಭೇಟಿ  Upalokayukta Justice K.N. Phaneendra visits Gadag district

ಲೋಕದರ್ಶನ ವರದಿ 

ಗದಗ, ಆ. 3: ಕರ್ನಾಟಕ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್‌. ಫಣೀಂದ್ರ ಅವರು ಆಗಸ್ಟ್‌ 5ರಿಂದ 7ರವರೆಗೆ ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.  ಆಗಸ್ಟ್‌ 5ರಂದು ಮಧ್ಯಾಹ್ನ 3.20ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು ಸಂಜೆ 4.45ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಸಂಜೆ 5.45ಕ್ಕೆ ಗದಗ ತಲುಪಿ ವಾಸ್ತವ್ಯ ಹೂಡಲಿದ್ದಾರೆ.  

ಆಗಸ್ಟ್‌ 6ರಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಸಾರ್ವಜನಿಕ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ಪರೀಶೀಲನಾ ಸಭೆ ನಡೆಸಲಿದ್ದಾರೆ. ಬಳಿಕ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಿ ವಿಚಾರಣೆ ನಡೆಸಲಿದ್ದಾರೆ. ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಸಹ ಇದೇ ಸ್ಥಳದಲ್ಲಿ ಸಾರ್ವಜನಿಕರ ದೂರುಗಳ ವಿಚಾರಣೆ ಮುಂದುವರಿಯಲಿದೆ. ನಂತರ ಗದಗದಲ್ಲೇ ವಾಸ್ತವ್ಯ ಮಾಡಲಿದ್ದಾರೆ.  

ಆಗಸ್ಟ್‌ 7ರಂದು ಬೆಳಿಗ್ಗೆ 10 ಗಂಟೆಯಿಂದ ಉಳಿದಿರುವ ಸಾರ್ವಜನಿಕ ದೂರುಗಳ ವಿಚಾರಣೆ ನಡೆಸಿ, ನಂತರ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸಂಜೆ 7.10ಕ್ಕೆ ಗದಗದಿಂದ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಲೋಕಾಯುಕ್ತ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.