ಉಪ್ಪಾರ ಸಮಾಜದ ಏಕೈಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಉಪ್ಪಾರ ಸಮಾಜ ಆಗ್ರಹ
Uppara Samaj demands that its only MLA, C. Puttarangashetty, be given a place in the cabinet
ಲೋಕದರ್ಶನ ವರದಿ
ಕಂಪ್ಲಿ 30 : ರಾಜ್ಯದಲ್ಲಿ ಉಪ್ಪಾರ ಸಮಾಜಕ್ಕೆ ಸಮರ್ಕ ರಾಜಕೀಯ ಪ್ರತಿನಿಧಿತ್ವ ದೊರಕಬೇಕಾದರೆ ಉಪ್ಪಾರ ಸಮಾಜದ ಏಕೈಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು' ಎಂದು ತಾಲೂಕು ಭಗೀರಥ ಉಪ್ಪಾರ ಸಮಾಜ ಅಧ್ಯಕ್ಷ ಯು.ನಾಗರಾಜ ಆಗ್ರಹಿಸಿದರು. ಪಟ್ಟಣದ ಐತಿಹಾಸಿಕ ಸೋಮೇಶ್ವರ ದೇವಸ್ಥಾನ ಬಳಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ. ಪುಟ್ಟರಂಗಶೆಟ್ಟಿ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿದ್ದು, ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಸುಮಾರು 30 ರಿಂದ 40 ಲಕ್ಷ ಉಪ್ಪಾರ ಸಮಾಜದ ಜನಸಂಖ್ಯೆ ಇದ್ದು, ಸಮಾಜಕ್ಕೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ'. ಉಪ್ಪಾರ ಸಮಾಜವು ಕಾಂಗ್ರೆಸ್ ಪಕ್ಷಕ್ಕೆ ಸದಾ ಬೆಂಬಲ ನೀಡುತ್ತಾ ಬಂದಿದ್ದು, ಇದೀಗ ಸಮಾಜದ ಆಶಯಕ್ಕೆ ಸ್ಪಂದಿಸಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮಾಜಕ್ಕೆ ನ್ಯಾಯ ಒದಗಿಸಬೇಕು' ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಯು.ವೆಂಕಟೇಶ, ಪ್ರಧಾನ ಕಾರ್ಯದರ್ಶಿ ಕೆ.ಗೋವಿಂದಪ್ಪ ಇದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 