ಶಿವಸೇನೆಗೆ ಉರ್ಮಿಳಾ ಮಾತೋಂಡ್ಕರ್ .....?
ಮುಂಬೈ,
ನವೆಂಬರ್ 30: ಬಾಲಿವುಡ್ ನಟಿ 'ರಂಗೀಲಾ' ಬೆಡಗಿ ಉರ್ಮಿಳಾ ಮಾತೋಂಡ್ಕರ್ ಶಿವಸೇನೆ
ಸೇರ್ಪಡೆಗೆ ವೇದಿಕೆ ಸಜ್ಜುಗೊಂಡಿದೆ. ಮಂಗಳವಾರ ಅವರು
ಪಕ್ಷಕ್ಕೆ ಸೇರಲಿದ್ದಾರೆ ಎಂದು ಶಿವಸೇನೆಯ
ಮುಖಂಡರೊಬ್ಬರು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ 2019ರಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದ ಉರ್ಮಿಳಾ, ನಂತರ ಐದು ತಿಂಗಳೊಳಗೆ ಕಾಂಗ್ರೆಸ್ ಪಕ್ಷಕ್ಕೆ ವಿದಾಯ ಹೇಳಿದ್ದರು. ರಾಜಕೀಯದಿಂದ ಕಳೆದೊಂದು ವರ್ಷದಿಂದ ದೂರವಿದ್ದ ಆಕೆ ಇದ್ದಕ್ಕಿದ್ದಂತೆ ಶಿವಸೇನೆ ಪಕ್ಷ ಸೇರಲು ಮುಂದಾಗಿದ್ದಾರೆ.
ಕಳೆದ ವರ್ಷ ಲೋಕಸಭಾ ಚುನಾವಣೆಗೆ ಮೊದಲು ಮಾರ್ಚ್‌ನಲ್ಲಿ ಉರ್ಮಿಳಾ ಕಾಂಗ್ರೆಸ್ ಸೇರಿದ್ದರು. ಲೋಕಸಭಾ ಚುನಾವಣೆಯಲ್ಲಿ ಮುಂಬೈ ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಬಿಜೆಪಿ ಅಭ್ಯರ್ಥಿ ಗೋಪಾಲ್ ಶೆಟ್ಟಿ ಎದುರು ಪರಾಭವಗೊಂಡಿದ್ದರು. ನಂತರ ಪಕ್ಷದಲ್ಲಿ ತಮ್ಮ ಪಾತ್ರದ ಬಗ್ಗೆ ಅಸಮಾಧಾನಗೊಂಡು ಪಕ್ಷದ ಹೈಕಮಾಂಡ್ ಗೆ ಪತ್ರ ಬರೆದಿದ್ದಾರೆ. ಈ ಪತ್ರ ಮಾಧ್ಯಮಗಳಿಗೆ ಸೋರಿಕೆಯಾಗಿ ಟೀಕೆಗೆ ಒಳಗಾಗಿದ್ದರು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಈಗ ಅವರು ಶಿವಸೇನೆ ಸೇರಲು ಸಜ್ಜುಗೊಂಡಿದ್ದಾರೆ.