ಸೈಕಲ್ ಬಳಸಿದರೆ ದೇಹ, ಪರಿಸರಕ್ಕೆ ಸಹಕಾರಿ : ಭೋವಿ
Using a bicycle is good for the body and the environment: Bhovi
ಲೋಕದರ್ಶನ ವರದಿ
ಯರಗಟ್ಟಿ 08 : ಸಮೀಪದ ತಲ್ಲೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಹಾಗೂ ಗ್ರಾಮ ಪಂಚಾಯತ ಆವರಣದಲ್ಲಿ ಸೋಮವಾರ ವಿಶ್ವ ಬೈಸಿಕಲ್ ದಿನಾಚರಣೆ ಆಚರಿಸಲಾಯಿತು. ಸೈಕಲ್ ಬೆಲ್ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಲಾ ಪ್ರಧಾನಗುರುಳಾದ ಡಿ. ಡಿ ಭೋವಿ ಸೈಕಲ್ ಓಡಿಸುವುದರಿಂದ ದೇಹಕ್ಕೆ ವ್ಯಾಯಾಮಮಾಗುತ್ತದೆ. ದೇಹವನ್ನು ಸದೃಢವಾಗಿಡುವುದರ ಜೊತೆಗೆ ಹೃದಯದ ಆರೋಗ್ಯ ಕಾಪಾಡುತ್ತದೆ. ನಿಯಮಿತವಾಗಿ ಸೈಕಲ್ ಓಡಿಸುವುದರಿಂದ ಆರೋಗ್ಯಯುತವಾಗಿರಬಹುದು ಎಂದರು.
ಈಚೆಗೆ ಸೈಕಲ್ ಬದಲಾಗಿ ದ್ವಿಚಕ್ರ ವಾಹನಗಳ ಬಳಕೆ ಹೆಚ್ಚಾಗಿದ್ದು ಮಾಲಿನ್ಯವೂ ಹೆಚ್ಚುತ್ತಿದೆ. ಕಡಿಮೆ ದೂರದ ಪ್ರಯಾಣಗಳಿಗೆ ಸೈಕಲ್ ಬಳಸುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಇಂಧನ ಉಳಿತಾಯವಾಗುವುದರ ಜೊತೆಗೆ ಆರೋಗ್ಯ ಮತ್ತು ಪರಿಸರ ಸುರಕ್ಷಿತವಾಗಿರುತ್ತದೆ ಎಂದರು. ಈ ವೇಳೆ ಪಿಡಿಓ ರಾಘವೇಂದ್ರಕುಮಾರ ಎಸ್. ಪಿ, ದೈಹಿಕ ಶಿಕ್ಷಣ ಶಿಕ್ಷಕ ಎಸ್.ಎಂ.ಹಂಜಿ, ಎಸ್.ಎಫ್.ಮುರಗನ್ನವರ, ಮಲ್ಲಿಕಾರ್ಜುನ ಬದಾಮಿ, ಎಸ್.ಎಫ್.ಬಡಿಗೇರ, ಗ್ರಾ.ಪಂ. ಕಾರ್ಯದರ್ಶಿ ಸತೀಶ ಬಡಿಗೇರ, ಗ್ರಾ. ಪಂ. ಕ್ಲಾರ್ಕ ರಾಜಶೇಖರ ಅಣ್ಣಿಗೇರಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 