ವಿದ್ಯಾರ್ಥಿಗಳು ದೊರೆತ ಸಂಪನ್ಮೂಲಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಡಾ ಸುನಿತ್
ಧಾರವಾಡ 15: ವಿದ್ಯಾರ್ಥಿಗಳು ತಮಗೆ ದೊರೆತ ಸಂಪನ್ಮೂಲಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಕಾಲೇಜು ಆಡಳಿತ ಮಂಡಳಿ ಕಾರ್ಯಧ್ಯಕ್ಷ ಡಾ ಸುನಿತ್ ಪುರೋಹಿತ್ನಗರದ ಕೆ ಇ ಬೋರ್ಡಿನ ಮಹಾವಿದ್ಯಾಲಯದಲ್ಲಿ ಮಂಗಳವಾರ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ಒಕ್ಕೂಟ, ಸಾಂಸ್ಕೃತಿಕ, ಎನ್ಎಸ್ಎಸ್ ಮತ್ತು ಕ್ರೀಡಾ ಚಟುವಟಿಕೆಗಳನ್ನು ಉದ್ಘಾಟಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ, ಜೀವನದಲ್ಲಿ ಯಶಸ್ಸು ಕಂಡುಕೊಳ್ಳಿ ಎಂದು ಸಲಹೆ ನೀಡಿದರು.
ಕವಿವಿ ಸಿಂಡಿಕೇಟ್ ಸದಸ್ಯ ರಾಬರ್ಟ್ ದದ್ದಾಪುರಿ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಭವಿಷ್ಯದ ಸವಾಲಿನತ್ತ ಗಮನ ಹರಿಸಿ ಎಂದು ಹೇಳಿದರು. ಮಹೇಶ್ ಹುಲ್ಲಣ್ಣವರ್ ಹಾಗೂ ಶ್ಯಾಮ್ ಮಲ್ಲನಗೌಡ ಅವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಎಂ. ಸಿದ್ಧಾಂತಿ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವನೆ ಬೆಳೆಸಿಕೊಂಡು, ಗುರಿಯತ್ತ ಸಾಗಿರಿ ಎಂದು ತಿಳಿಸಿದರು. ಕಾರ್ಯಕ್ರಮದ ಅತಿಥಿಗಳನ್ನು ಪ್ರೊ. ಈಶ್ವರರಾವ್ ಕರಾತ್ ಪರಿಚಯಿಸಿದರು. ರೂಪ ಚಂದರಗಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸವಿತಾ ಕುಲಕರ್ಣಿ ನಿರೂಪಿಸಿದರು. ಈ ವೇಳೆ ಕಾವೇರಿ ಚಾಕಲಬ್ಬಿ, ನೇತ್ರಾವತಿ ಚಲವಾದಿ, ಮೊಹಮ್ಮದ್ ರಫೀಕ್ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದರು.ಫೋಟೋ ಅಡಿಬರಹ : ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು