ವಿಜಯಪುರ-ಹುಬ್ಬಳ್ಳಿ ಇಂಟರ್ ಸಿಟಿ ರೈಲು ಸೇವೆಗೆ ಫೆಬ್ರವರಿ 16ರಂದು ಚಾಲನೆ

ಹುಬ್ಬಳ್ಳಿ, ಫೆ.14, ಬಹು ನಿರೀಕ್ಷಿತ ವಿಜಯಪುರ-ಹುಬ್ಬಳ್ಳಿ ಇಂಟರ್ಸಿಟಿ ರೈಲು ಸೇವೆಗೆ ಫೆಬ್ರವರಿ 16ರಂದು ಚಾಲನೆ ದೊರೆಯಲಿದೆ ಎಂದು ನೈರುತ್ಯ ರೈಲ್ವೆ ಮೂಲಗಳು ಶುಕ್ರವಾರ ತಿಳಿಸಿವೆ.ಈ ರೈಲು ವಿಜಯಪುರ ಮತ್ತು ಹುಬ್ಬಳ್ಳಿ ನಡುವೆ ಸಂಪರ್ಕವನ್ನು ಒದಗಿಸುತ್ತದೆ. ಈ ರೈಲು ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳ ಮೂಲಕ ಹಾದುಹೋಗುವ ಮೂಲಕ ಸಾರ್ವಜನಿಕರಿಗೆ ಅನುಕೂಲವಾಗುವುದರ ಜೊತೆಗೆ ವಾಣಿಜ್ಯ ಚಟುವಟಿಕೆಗಳಿಗೆ ಹೆಚ್ಚಿನ ಅವಕಾಶವನ್ನು ಒದಗಿಸುತ್ತದೆ ಎಂದು ಮೂಲಗಳು ತಿಳಿಸಿವೆ.