ವ್ಹಿ.ವಾಯ್. ಪಾಟೀಲ ಪ್ರೌಢಶಾಲೆ ಶೇ.100 ರಷ್ಟು ಫಲಿತಾಂಶ
ಇಂಡಿ: ತಾಲೂಕಿನ ಪಡನೂರ ಗ್ರಾಮದ ಚೆನ್ನಬಸವೇಶ್ವರ ವಿದ್ಯಾವರ್ಧಕ ಸಂಸ್ಥೆ (ರಿ) ಅಡಿಯಲ್ಲಿನ ವ್ಹಿ.ವಾಯ್. ಪಾಟೀಲ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶವನ್ನು ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 33 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದ್ದು ಅದರಲ್ಲಿ 33 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಅದರಲ್ಲಿ ಡಿಸ್ಟಿಂಕ್ಷನ್ ನಲ್ಲಿ 13 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 20 ವಿದ್ಯಾರ್ಥಿಗಳು ಪಾಸಾಗಿದ್ದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ರಾಕೆಶ ಧೂಳಖೇಡ 625 ಕ್ಕೆ 617 (98.72) ಅಂಕವನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ, ಮಹಾದೇವ ಮೇತ್ರಿ, 625 ಕ್ಕೆ 586 (93.76) ಅಂಕ ಪಡೆದು ದ್ವಿತೀಯ ಸ್ಥಾನ, ಸೋನಾಲಿ ಗುರವ 625 ಕ್ಕೆ 582 ಅಂಕವನ್ನು (93.12) ಪಡೆದು ತೃತೀಯ ಸ್ಥಾನವನ್ನು ಪಡೆದಿದ್ದು ಶಾಲೆಯ ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಮತ್ತು ಪಡನೂರ ಗ್ರಾಮಸ್ಥರು ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.