ಪಾಳ ಉರ್ದು ಶಾಲೆಯಲ್ಲಿ ಲಸಿಕಾ ಅಭಿಯಾನ: ಗರ್ಭಕಂಠದ ಕ್ಯಾನ್ಸರ್ ತಡೆಗೆ ಡಾ. ನರೇಂದ್ರ ಪವಾರ್ ಕರೆ
Vaccination drive at Pala Urdu School: Dr. Narendra Pawar calls for prevention of cervical cancer
ಲೋಕದರ್ಶನ ವರದಿ
ಮುಂಡಗೋಡ 14 : ತಾಲ್ಲೂಕಿನ ಪಾಳ ಗ್ರಾಮದ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ 14 ವರ್ಷದ ಹೆಣ್ಣುಮಕ್ಕಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಎಚ್‌ಪಿವಿ ಲಸಿಕಾ ಅಭಿಯಾನದಲ್ಲಿ ಶೇ. 80ರಷ್ಟು ಪ್ರಗತಿ ಸಾಧಿಸಲಾಗಿದೆ. ಆರೋಗ್ಯ ಇಲಾಖೆಯು ಪಾಲಕರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಲಸಿಕಾ ಕಾರ್ಯಕ್ರಮ ಸುಸೂತ್ರವಾಗಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ನರೇಂದ್ರ ಪವಾರ್, "ಎಚ್‌ಪಿವಿ ಲಸಿಕೆಯು ಸಂಪೂರ್ಣ ಸುರಕ್ಷಿತವಾಗಿದ್ದು, ಹೆಣ್ಣುಮಕ್ಕಳನ್ನು ಗರ್ಭಕಂಠದ ಕ್ಯಾನ್ಸರಿ್ನಂದ ರಕ್ಷಿಸಲು ಸಹಕಾರಿಯಾಗಿದೆ. ಸಾರ್ವಜನಿಕರು ಯಾವುದೇ ಅಪಪ್ರಚಾರ ಅಥವಾ ವದಂತಿಗಳಿಗೆ ಕಿವಿಗೊಡದೆ ಲಸಿಕೆ ಕೊಡಿಸಬೇಕು" ಎಂದರು.
ಈ ಕಾರ್ಯಕ್ರಮದಲ್ಲಿ ಮಳಗಿ ಪಿಎಚ್‌ಸಿ ಆಡಳಿತ ವೈದ್ಯಾಧಿಕಾರಿ ಡಾ. ಶಿಫಾ ಮುಜಾವರ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ, ಮುಖ್ಯಗುರು ವಾಸುದೇವ್ ನಾಯಕ್, ಮಾಜಿ ಗ್ರಾ.ಪಂ. ಅಧ್ಯಕ್ಷ ಚಂದ್ರಗೌಡ ಪಾಟೀಲ, ನಾಗನಗೌಡ ಪಾಟೀಲ್, ಮಮ್ಮದ್ ಖಾನ್ ನಾಗರೊಳ್ಳಿ, ಎಸ್‌ಡಿಎಂಸಿ ಅಧ್ಯಕ್ಷ ದಾದಾ ಖಾನ್ ಪಠಾಣ್, ಇಬ್ರಾಹಿಂ ಮೆಣಸೀ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಪಾಲಕರು ಉಪಸ್ಥಿತರಿದ್ದು ಅಭಿಯಾನವನ್ನು ಯಶಸ್ವಿಗೊಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 