ಮೂಡಲಗಿ

45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ: ಕಡಾಡಿ

45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ: ಕಡಾಡಿ
ಬೆಳಗಾವಿ ವಂಟಮೂರಿ ಕಾಲನಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್-19 ಲಸಿಕೆಯ ಮೊದಲನೇ ಹಂತದ ಡೋಸ್ ಪಡೆಯುತ್ತಿರುವ

ಮೂಡಲಗಿ 01: ದೇಶದಲ್ಲಿ ಕರೋನಾ ಎರಡನೇ ಅಲೆ ತೀವ್ರತೆ ಹೆಚ್ಚುತ್ತಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಮೂರನೇ ಹಂತ ಕೋವಿಡ್-19  ಲಸಿಕೆ ಅಭಿಯಾನಕ್ಕೆ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುತ್ತದೆ ಎಂದು ರಾಜ್ಯಸಭೆ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.

ಗುರುವಾರ (ಏ.1) ರಂದು ಬೆಳಗಾವಿ ವಂಟಮೂರಿ ಕಾಲನಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್-19 ಲಸಿಕೆಯ ಮೊದಲನೇ ಹಂತದ ಡೋಸ್ ಪಡೆದು ಮಾತನಾಡಿದ ಈರಣ್ಣ ಕಡಾಡಿ ಅವರು 650 ಖಾಸಗಿ ಮತ್ತು 4850 ಸರ್ಕಾರಿ ಸೇರಿದಂತೆ ರಾಜ್ಯಾದ್ಯಂತ ಒಟ್ಟು 5,500 ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ ಎಂದರು.

ಜನವರಿ 16 ರಂದು ಆರಂಭವಾದ ಒಂದನೇ ಹಂತದಲ್ಲಿ ಆರೋಗ್ಯ ರಕ್ಷಣೆ ಸಿಬ್ಬಂದಿ ಮತ್ತು ಮೂಂಚೂಣಿ ಕಾರ್ಯಕರ್ತರಿಗೆ ಲಸಿಕೆ ಹಾಕಲಾಗಿತ್ತು. 2ನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರು ಹಾಗೂ ಬೇರೆ ಆರೋಗ್ಯ ಸಮಸ್ಯೆಗಳಿರುವ 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಲು ಅರ್ಹರಾಗಿದ್ದಾರೆ.

ಈಗ ಯಾವುದೇ ನಿರ್ದಿಷ್ಟ ಇತರ ರೋಗಗಳು ಇಲ್ಲದಿದ್ದರೂ 45 ವರ್ಷ ಮೇಲ್ಪಟ್ಟ ಎಲ್ಲರೂ ಮೂರನೇ ಹಂತದಲ್ಲಿ ಲಸಿಕೆ ಪಡೆಯಬೇಕೆಂದು ಸಾರ್ವಜನಿಕರಿಗೆ ಮನವಿ ಮಾಡಿದ ಅವರು ಸರ್ವ ನಾಗರಿಕರು ಆದಷ್ಟು ಬೇಗ ನೋಂದಣಿ ಮಾಡಿಕೊಂಡು, ಕೋವಿಡ್-19 ಲಸಿಕೆ ಪಡೆಯಬೇಕೆಂದರು. 

ಒಗ್ಗಟ್ಟಾಗಿ ಕೊರೋನಾ ವಿರುದ್ಧ ಹೋರಾಡೋಣ. ಭಾರತವನ್ನು ಕೊರೊನಾ ಮುಕ್ತವಾಗಿಸಲು ನಾವೆಲ್ಲರೂ ಪಣ ತೊಡೋಣ ಎಂದರು. ಬಳಿಕ ಕೊರೊನಾ ವಾರಿಯರ್ಸ್‍ಗಳಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ವೈದ್ಯರು, ದಾದಿಯರು, ಆಶಾ, ಅಂಗನವಾಡಿ ಕಾರ್ಯಕರ್ತರು ಹಾಗೂ ಸಿಬ್ಬಂದಿ ವರ್ಗಕ್ಕೆ ಧನ್ಯವಾದ ಸಲ್ಲಿಸಿದರು. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಜಯವಂತ ಧನ್ವಂತರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿ ಓದಿ