36ನೇ ವಾರ್ಡ್‌ನ ವಿದ್ಯಾರ್ಥಿಗಳಿಗೆ ಲಸಿಕಾ ಅಭಿಯಾನ
ಲೋಕದರ್ಶನ ವರದಿ
ಬಳ್ಳಾರಿ 03: ದಿನೇ ದಿನೇ ವಿಸ್ತರಿಸುತ್ತಿರುವ ಕೊರೊನಾ ವೈರಸ್‌ನಿಂದ ಮುಕ್ತಗೊಳಿಸಲು ಭಾರತ ಪ್ರಧಾನಿ ನರೇಂದ್ರ ಮೋದಿ ಅವರ ನಿರಂತರ ಶ್ರಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ 15 ರಿಂದ 18ವರ್ಷದೊಳಗಿನ ಮಕ್ಕಳಿಗೆ ಕೋವಿಡ್-19 ಲಸಿಕಾಕರಣವನ್ನು ಪ್ರಾರಂಭಿಸಿದ್ದು, ಇದರ ಅಂಗವಾಗಿ ಬಳ್ಳಾರಿ ಮಹಾನಗರ ಪಾಲಿಕೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಇಂದು 36ನೇ ವಾರ್ಡ್‌ನ ಹವಂಭಾವಿ ಪ್ರದೇಶದ ಚೈತನ್ಯ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಲಸಿಕಾ ಅಭಿಯಾನವನ್ನು ಪಾಲಿಕೆ ಸದಸ್ಯೆ ಪಿ.ಕಲ್ಪನಾ ವೆಂಕಟರಾಮಿರೆಡ್ಡಿ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ 15 ವರ್ಷ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ಹಾಕಿಸಲಾಯಿತು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ವಾರ್ಡಿನ ಮಹಿಳಾ ಮುಖಂಡರು ಉಪಸ್ಥಿತರಿದ್ದರು.