ಕೋವಿಡ್ ನಿರ್ಮೂಲನೆಗೆ ಲಸಿಕೆ ಅವಶ್ಯಕ
ಕೋವಿಡ್ ನಿರ್ಮೂಲನೆಗೆ ಲಸಿಕೆ ಅವಶ್ಯಕ
ಗುಳೇದಗುಡ್ಡ03: ಕೋವಿಡ್‍ನಿಂದ ಎಲ್ಲ ಕ್ಷೇತ್ರಗಳಲ್ಲಿ ನಷ್ಟವಾಗಿದೆ, ಜೀವಹಾನಿಯಂತೂ ಹೇಳತೀರದು ಎಲ್ಲರೂ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕೋವಿಡ್ ನಿರ್ಮೂಲನೆ ಮಾಡಬೇಕೆಂದು ಸರ್ಕಾರಿ ಪದವಿ ಕಾಲೇಜ್ ಪ್ರಾಚಾರ್ಯ ಫಕೀರಪ್ಪ ಚನ್ನಪ್ಪಗೌಡ್ರ ಹೇಳಿದರು.
ಅವರು ಗುರುವಾರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೆಜಿನಲ್ಲಿ ತಾಲ್ಲೂಕು ಆರೋಗ್ಯ ಇಲಾಖೆ, ರಾಷ್ಟೀಯ ಲಸಿಕಾ ಅಭಿಯಾನ ಅಡಿಯಲ್ಲಿ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳಿಗಾಗಿ ಕೋವಿಡ್-19 ಉಚಿತ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ ಅಗಷ್ಟ ನಂತರ ಆಫ್ಲೈನ್ ಕ್ಲಾಸುಗಳು ಆರಂಭವಾಗುವುದರಿಂದ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಲಾಗುತ್ತಿದೆ. 3 ನೇ ಅಲೆಯಿಂದ ವಿದ್ಯಾರ್ಥಿಗಳಿಗೆ ಆಗುವ ಹಾನಿಯನ್ನು ತಡೆಯಬಹುದು ಮತ್ತು ರೋಗ ನಿಯಂತ್ರಣ ಮಾಡಲು ಲಸಿಕೆಯಿಂದ ಸಾಧ್ಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯ ತಂಡದಿಂದ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಯಿತು. ಸಹಾಯಕ ಪ್ರಾಧ್ಯಾಪಕರಾದ ಸಂತೋಷ್ ಹಾಗೂ ಶ್ರೀಮತಿ ಗೀತಾ ಸಾತನೂರ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪೋಟೋ 3ಜಿಎಲ್‍ಡಿ 1 - ಪದವಿ ಕಾಲೇಜ್ ವಿದ್ಯಾರ್ಥಿನಿ ಲಸಿಕೆ ಹಾಕಿಸಿಕೊಳ್ಳುತ್ತಿರುವುದು.
3ಜಿಎಲ್‍ಡಿ2- ವಿದ್ಯಾರ್ಥಿಗಳು ಸಾಲಾಗಿ ನಿಂತು ಲಸಿಕೆ ಪಡೆದರು.