ಜ.28 ರಿಂದ 15ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಯಾವುದೇ ಜಾನುವಾರು ಸಹ ಲಸಿಕೆಯಿಂದ ವಂಚಿತವಾಗದಂತೆ ಕ್ರಮವಹಿಸಿ: ಜಿಲ್ಲಾಕಾರಿ ಡಾ.ವೆಂಕಟೇಶ್
ಹಾವೇರಿ23: ಹಾವೇರಿ ಜಿಲ್ಲೆಯಲ್ಲಿ ಜನವರಿ 28 ರಿಂದ ಫೆಬ್ರುವರಿ 16ರವರೆಗೆ 15ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಯಾವುದೇ ಜಾನುವಾರು ಸಹ ಲಸಿಕೆಯಿಂದ ವಂಚಿತವಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಕೇಂದ್ರ ಪುರಸ್ಕೃತ 15ನೇ ಸುತ್ತಿನ ಕಾಲುಬಾಯಿ ರೋಗ ಲಸಿಕೆ ಕಾರ್ಯಕ್ರಮ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮ ನಿಗದಿ ಪಡಿಸಿದ 15 ದಿನಗಳ ಅವಧಿವರೆಗೆ ಪೂರ್ಣಗೊಳಿಸಿ ಪ್ರತಿಶತ 100 ರಷ್ಟು ಪ್ರಗತಿ ಸಾಧಿಸಬೇಕು. ಲಸಿಕೆ ಹಾಕಲು ಇದು ಸೂಕ್ತಕಾಲವಾಗಿದ್ದು, ಈ ಸಮಯದಲ್ಲಿ ಲಸಿಕೆ ಹಾಕುವದರಿಂದ ಮೇ ತಿಂಗಳಲ್ಲಿ ಸಂಭವಿಸಬಹುದಾದ ರೋಗೋದ್ರೇಕ ತಡೆಗಟ್ಟಲು ಸಹಾಯವಾಗುತ್ತದೆ. ಲಸಿಕೆ ಹಾಕುವ ಸಿಬ್ಬಂದಿಗಳು ನಿಗದಿಪಡಿಸಿದ ಗ್ರಾಮಗಳಲ್ಲಿ ಪಲ್ಸ್ ಪೋಲಿಯೊ ಮಾದರಿಯಲ್ಲಿ ಬೆಳಿಗ್ಗೆ 6 ಗಂಟೆಗೆ ಮನೆ ಮನೆಗೆ ತೆರಳಿ ಲಸಿಕಾ ಕಾರ್ಯ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು
ಲಸಿಕೆ ಔಷಧಿಯನ್ನು (ವ್ಯಾಕ್ಸಿಲೇಟರ್) ನಿಗಧಿತ ಕೋಲ್ಡ್ನಲ್ಲಿ ಇರುವಂತೆ ಜಾಗೃತಿ ವಹಿಸಬೇಕು ಮತ್ತು ಶುದ್ಧವಾಗಿರಬೇಕು. ಈ ಲಸಿಕೆ ರೋಗ ನಿರೋಧ ಶಕ್ತಿ ಹೆಚ್ಚಿಸಬೇಕು. ಲಸಿಕೆ ನೀಡಿದ ಸಂದರ್ಭದಲ್ಲಿ ಅಲಜರ್ಿ ಅಥವಾ ಇತರೆ ತುತರ್ು ಪರಿಸ್ಥಿತಿ ನಿಭಾಯಿಸಲು ತುತರ್ು ಔಷಧಿಗಳನ್ನು ಜೊತೆಗೆ ಇಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ, ತಹಶೀಲ್ದಾರ ಕಚೇರಿ ಹಾಗೂ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಈ ಕಾರ್ಯಕ್ರಮದ ಮಾಹಿತಿಯ ಬ್ಯಾನರ್ಗಳನ್ನು ಹಾಕಬೇಕು. ಈ ಕಾರ್ಯಕ್ಕೆ ತೆರಳುವ ವಾಹನಗಳಿಗೂ ಸಹ ಲಸಿಕಾ ಕಾರ್ಯಕ್ರಮ ಬ್ಯಾನರ್ ಹಾಕಬೇಕು. ಪ್ರತಿ ದಿನ ಎಷ್ಟು ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ ಎಂಬ ಮಾಹಿತಿಯನ್ನು ಸರಿಯಾಗಿ ನಮೂದಿಸಬೇಕು ಎಂದು ಹೇಳಿದರು.
ಇಲಾಖೆಯ ಏಳು ಮತ್ತು ಹಾಲು ಒಕ್ಕೂಟದ 33 ವಾಹನಗಳನ್ನು ಈ ಕಾರ್ಯಕ್ಕೆ ಒದಗಿಸಲಾಗಿದೆ. ಲಸಿಕೆ ಹಾಕುವ ಗ್ರಾಮಗಳ ಭೇಟಿಯ ದಿನಾಂಕವನ್ನು ಸಾಕಷ್ಟು ಮುಂಚಿತವಾಗಿ ತಿಳಿಯಪಡಿಸಿ ಪ್ರಚಾರ ಕೈಕೊಳ್ಳಲಾಗುವುದು. ಜಿಲ್ಲೆಯ ಆಯ್ದ ಹತ್ತು ಗ್ರಾಮಗಳಲ್ಲಿ ಗುರುತಿಸಲಾಗುವ 200 ದನ ಮತ್ತು ಎಮ್ಮೆಗಳಲ್ಲಿ ಲಸಿಕಾ ಕಾರ್ಯದ ಪ್ರಥಮ ದಿನದಂದು ಮತ್ತು ಲಸಿಕೆ ಹಾಕಲಾದ 28 ನೇ ದಿನದಂದು ರಕ್ತದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವ್ಯದು ಎಂದು ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕರು, ಜಿಲ್ಲಾ ನಗರಾಭಿವೃದ್ದಿ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ನಗರಸಭಾ ಆಯುಕ್ತರು, ಪುರಸಭಾ ಅಧಿಕಾರಿಗಳು ಹಾಗೂ ಪಶುಪಾಲನಾ ಇಲಾಖೆಯ ಉಪನಿದರ್ೇಶಕರು, ಸಹಾಯಕ ಉಪನಿದರ್ೇಶಕರು, ಪಶುವೈದ್ಯಾಧಿಕಾರಿಗಳು, ಸ್ಥಳೀಯ ಗ್ರಾಮಪಂಚಾಯತ ಹಾಗೂ ಹಾಲು ಉತ್ಪಾದಕರ ಸಹಾಕಾರಿ ಸಂಘ, ಇತರೆ ಸ್ಥಳೀಯ ಸಂಸ್ಥೆಗಳ ಅಗತ್ಯ ಸಹಕಾರ ಅಗತ್ಯವಾಗಿದೆ. ಜೊತೆಗೆ ಜಿಲ್ಲೆಯ ರೈತ ಬಾಂಧವರು ತಮ್ಮ ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿಕೊಂಡರು. ಸಭೆಯಲ್ಲಿ ತಾಲೂಕಾ ಪಶು ವೈದ್ಯಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 