ವಾಲ್ಮೀಕಿ ನಿಗಮದ ಹಣ ಹಗರಣ: ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಧರಣಿ

ವಾಲ್ಮೀಕಿ ನಿಗಮದ ಹಣ ಹಗರಣ: ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಧರಣಿ  Valmiki Corporation funds scam: BJP stages protest demanding Minister Nagendra's resignation

ಕಾರವಾರ, ಆ.19: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ವಾಲ್ಮೀಕಿ ನಿಗಮದ ಹಣ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ವತಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಯಿತು. 

ವಿಧಾನಸಭಾ ಕ್ಷೇತ್ರದ ಒಬಿಸಿ ಮೋರ್ಚಾ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ಎಸ್‌. ನಾಯ್ಕ್‌ ಭಾಗವಹಿಸಿ, ವಾಲ್ಮೀಕಿ ನಿಗಮದ ಬಹುಕೋಟಿ ಹಣ ದುರ್ಬಳಕೆ ಪ್ರಕರಣದಲ್ಲಿ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಎರಡನೇ ದಿನದ ಧರಣಿಗೆ ಚಾಲನೆ ನೀಡಲಾಯಿತು.  

ರೂಪಾಲಿ ನಾಯ್ಕ್‌ ಮಾತನಾಡಿ, ನಿಗಮದ ಹಣ ಹಗರಣದ ಕುರಿತು ತನಿಖೆ ನಡೆಯುತ್ತಿದ್ದರೂ ಸಚಿವ ಸ್ಥಾನ ನೀಡಿರುವುದು ಸರಿಯಲ್ಲ. ಇಂತಹ ಭ್ರಷ್ಟಾಚಾರಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.  

ಬಿಜೆಪಿ ಜಿಲ್ಲಾಧ್ಯಕ್ಷ ಎನ್‌.ಎಸ್‌. ಹೆಗಡೆ ಮಾತನಾಡಿ, ಸಚಿವ ನಾಗೇಂದ್ರ ವಿರುದ್ಧ ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.  ಧರಣಿಯಲ್ಲಿ ರಾಜ್ಯ, ಜಿಲ್ಲಾ ಹಾಗೂ ಮಂಡಲ ಮಟ್ಟದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್‌ ಏರಿ​‍್ಡಸಿದ್ದರು.