ಮುಂಡರಗಿ

ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆ

ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆ

ಮುಂಡರಗಿ 03: ಅ.17 ರಂದು ತಾಲೂಕು ಆಡಳಿತದಿಂದ ಆಚರಿಸಲಾಗುತ್ತಿರುವ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರಬೇಕೆಂದು ತಹಶಿಲ್ದಾರ ಎರಿ​‍್ರಸ್ವಾಮಿ.ಪಿ.ಎಸ್ ಸೂಚಿಸಿದರು. 

ಪಟ್ಟಣದ ತಹಶಿಲ್ದಾರ ಕಾರ್ಯಾಲಯದಲ್ಲಿ ಅ.17 ರಂದು ಮಹರ್ಷಿ ವಾಲ್ಮೀಕಿ ಜಯಂತಿ ನಿಮಿತ್ಯ ಹಮ್ಮಿಕೊಂಡಿರುವ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಾಲ್ಮೀಕಿ ಜಯಂತಿ ದಿನದಂದು ತಾಲೂಕು ಮಟ್ಟದ ಎಲ್ಲಾ ಇಲಾಖೆಯ ತಮ್ಮ ತಮ್ಮ ಕಛೇರಿಯಲ್ಲಿ ವಾಲ್ಮೀಕಿ ಜಯಂತಿಯನ್ನು ಆಚರಿಸಿಕೊಂಡು ನಂತರ ಬೆಳಿಗ್ಗೆ 11 ಗಂಟೆಗೆ ತಹಶಿಲ್ದಾರ ಕಾರ್ಯಾಲಯದಲ್ಲಿ ಜರುಗುವ ತಾಲೂಕು ಮಟ್ಟದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಳ್ಳಬೇಕು ಎಂದರು. 

ಈ ವೇಳೆ ತಾಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷ ರಾಮಣ್ಣ ಕೋಳಿ ಮಾತನಾಡಿ, ಕಳೆದ ಎರಡು ಮೂರು ವರ್ಷಗಳಲ್ಲಿ ಕರೋನಾ, ಬರಗಾಲವೆಂದು ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಸಾಧ್ಯವಾಗಿರುವುದಿಲ್ಲ. ಹೀಗಾಗಿ ಈ ವರ್ಷ ವಿಶೇಷವಾಗಿ ಆಚರಣೆ ಮಾಡಬೇಕು. ಇದಕ್ಕಾಗಿ ತಾಲೂಕಿನ ಎಲ್ಲಾ ಅಧಿಕಾರಿಗಳು ಕಾರ್ಯಕ್ರಮಕ್ಕೆ ಸಹಾಯ ಸಹಕಾರ ನೀಡಬೇಕು ಎಂದು ಕೋರಿದರು. 

ಶಿಕ್ಷಕ ಚಂದ್ರಶೇಖರ ಪೂಜಾರ ಮಾತನಾಡಿ, ವಾಲ್ಮೀಕಿ ಜಯಂತಿಯನ್ನು ಬರೀ ವೇಧಿಕೆಯಲ್ಲಿ ಭಾಷಣ ಮಾಡುವುದಕ್ಕೆ ಸೀಮಿತವಾಗಬಾರು, ವಾಲ್ಮೀಕಿ ಮಹಾ ಋಷಿಗಳ ಜೀವನ ಶೈಲಿ, ಕೊಡುಗೆ ಹಾಗೂ ಅವರ ತತ್ವಾದರ್ಶಗಳನ್ನು ಮನೆ-ಮನಗಳಿಗೆ ಮುಟ್ಟಿಸುವಂತ ಕೆಲಸವಾಗಬೇಕು. ಹಾಗೂ ಯಾವುದೇ ಸಭೆ ಸಮಾರಂಭ ಮಾಡಬೇಕಾದರೆ ಎಲ್ಲರಲ್ಲೂ ಸಮಯದ ಪ್ರಜ್ಞೆಯ ಅಗತ್ಯತೆ ಇರುತ್ತದೆ. ವಾಲ್ಮೀಕಿ ಜಯಂತಿ ಕಾರ್ಯಕ್ರಮ ಬರೀ ಪ್ರೋಟೋ ಕಾಲ್ ಪ್ರಕಾರ ನಡೆಯಕೂಡದು. ಅಲ್ಲಿ ಎಲ್ಲಾ ಸರ್ಕಾರಿ ಅಧಿಕಾರಿಗಳ ಪಾಲ್ಗೊಳ್ಳುವಿಕೆಯೂ ಅಷ್ಟೇ ಮುಖ್ಯವಾಗಿರುತ್ತದೆ. ಈ ಬಗ್ಗೆ ತಹಶಿಲ್ದಾರರು ಎಲ್ಲಾ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಸೂಕ್ತ ಕ್ರಮಕೈಕೊಳ್ಳಬೇಕು ಎಂದು ಆರೋಪಿಸಿದರು. 

ಸುರೇಶ ಕಲ್ಲಕುಟಿಗೇರ ಮಾತನಾಡಿ, ಕಳೆದ ವರ್ಷ ಬರಗಾಲದ ಸಮಸ್ಯೆ ಎದುರಾದ ಸಂದರ್ಭದಲ್ಲಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಮಾಡಲು ಸಾಧ್ಯವಾಗಿಲ್ಲ. ಈ ವರ್ಷ ಎಲ್ಲಲ್ಲೂ ಚೆನ್ನಾಗಿ ಮಳೆಯಾದ ಪ್ರಯುಕ್ತ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಹೆಚ್ಚಿನ ಆಸಕ್ತಿವಹಿಸಿ ಅದ್ದೂರಿಯಿಂದ ಆಚರಿಸೋಣ. ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುವುದರೊಂದಿಗೆ ವಾಲ್ಮೀಕಿ ಜೀವನ ಚರಿತ್ರೆ ಆಧರಿಸಿ ಸಾಕ್ಷ್ಯ ಚಿತ್ರವನ್ನು ಪ್ರದರ್ಶಿಸುವ ಪ್ರಯತ್ನವಾಗಬೇಕಿದೆ ಎಂದು ಸಲಹೆ ನೀಡಿದರು. 

ಎಲ್ಲಾ ಸಲಹೆಗಳನ್ನು ಸ್ವೀಕರಿಸಿ ಪ್ರತಿಕ್ರೀಯಿಸಿದ ತಹಶಿಲ್ದಾರ ಎರಿ​‍್ರಸ್ವಾಮಿ.ಪಿ.ಎಸ್, ತಾಲೂಕು ಆಡಳಿತದ ವತಿಯಿಂದ ಎಲ್ಲಾ ಇಲಾಖಾಧಿಕಾರಿಗಳೊಂದಿಗೆ ಅ.17ರಂದು ಬೆಳಿಗ್ಗೆ 11 ಗಂಟೆಗೆ ತಹಶಿಲ್ದಾರ ಕಾರ್ಯಾಲಯದಲ್ಲಿ ತಾಲೂಕು ಮಟ್ಟದ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುವುದು. ನಂತರ ಸಮಾಜದ ವತಿಯಿಂದ ಅದ್ದೂರಿಯಾಗಿ ಆಚರಿಸಲು ತಾಲೂಕು ಕಮೀಟಿಯಿಂದ ತಿಳಿಸಿದ ದಿನದಂದು ಅದ್ದೂರಿಯಾಗಿ ಜಯಂತಿ ಕಾರ್ಯಕ್ರಮವನ್ನು ಮಾಡೋಣವೆಂದು ಹೇಳಿದರು. 

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಅರುಣಾ ಸೋರಗಾಂವಿ ವಾಲ್ಮೀಕಿ ಜಯಂತಿಯ ರೂಪರೇಷಗಳನ್ನು ಸಭೆಯಲ್ಲಿ ಪ್ರಸ್ತಾಪಿಸಿದರು. ಬಸವರಾಜ ನವಲಗುಂದ, ಸುರೇಶ ಬಣಕಾರ, ಶ್ರೀನಿವಾಸ ಕೊರ್ಲಗಟ್ಟಿ ಮಾತನಾಡಿದರು. 

ಈ ಸಂದರ್ಭದಲ್ಲಿ ತಾ.ಪಂ. ಇಓ ವಿಶ್ವನಾಥ ಹೊಸಮನಿ, ಪ್ರಾಚಾರ್ಯ ಎಸ್‌.ಆರ್‌.ಚಿಗರಿ, ಪವಿತ್ರಾ ಕಲ್ಲಕುಟಿಗೇರ, ಲಕ್ಷ್ಮಣ್ಣ ತಗಡಿನಮನಿ, ಅಡಿವೆಪ್ಪ ಚಲವಾದಿ, ಭೀಮಣ್ಣ ವಾಲಿಕಾರ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಎಲ್ಲಾ ಸಮಾಜದ ಮುಖಂಡರು ಇತರರು ಇದ್ದರು. 


ಸುದ್ದಿ ಓದಿ