ಬೆಟಗೇರಿ ಗ್ರಾಮದಲ್ಲಿ ಕಟ್ಟಾ ವಾರ ಆಚರಣೆ
Vara celebration in Betageri village
ಬೆಟಗೇರಿ, 30 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜನ-ಜಾನುವಾರುಗಳಿಗೆ ರೋಗ-ರುಜೀನ ಬರದಂತೆ ಹಾಗೂ ಸಕಾಲಕ್ಕೆ ಮಳೆಯಾಗದಿದ್ದ ಕಾರಣ ಮಳೆಗಾಗಿ ಇದೇ ಮಂಗಳವಾರ ಜು.1 ಸೇರಿದಂತೆ ಮುಂದೆ ಬರುವ ವಾರದ ಪ್ರತಿ ಮಂಗಳವಾರ ಜು.8, ಶುಕ್ರವಾರ ಜು.11 ಮಂಗಳವಾರ ಜು.15, ಮಂಗಳವಾರ ಜು.22 ಸೇರಿ ಒಟ್ಟು 5 ದಿನ ಸಂಪ್ರದಾಯದಂತೆ ವಾರ ಹಿಡಿಯಲಾಗಿದೆ.
ಜು.1ರಂದು ಮುಂಜಾನೆ 9 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಪುರ ದೇವರ ಪಲ್ಲಕ್ಕಿ ಉತ್ಸವದ ಮೂಲಕ ಗ್ರಾಮದ ನಾಲ್ಕು ದಿಕ್ಕುಗಳ ಮುಖ್ಯ ರಸ್ತೆಗಳಿಗೆ ಊರಿನ ಸೀಮೆಗೆ ಕರಿ ಕಟ್ಟುವದು ನಡೆದ ಬಳಿಕ ಸ್ಥಳೀಯರಿಂದ ಪುರದೇವರ ದೇವಸ್ಥಾನಕ್ಕೆ ತೆರಳಿ ಪೂಜೆ, ನೈವೇದ್ಯ ಸಮರ್ಿಸುವ, ದೇವಾಲಯ ಕಟ್ಟೆಗಳಿಗೆ ನೀರು ಹಾಕುವದು ಸೇರಿದಂತೆ ಕಟ್ಟಾ ವಾರ ಆಚರಣೆಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ಬೆಟಗೇರಿ ಗ್ರಾಮದಲ್ಲಿ ಕಟ್ಟಾ ವಾರ ಆಚರಣೆ : ಬೆಟಗೇರಿ ಗ್ರಾಮದಲ್ಲಿ ನಮ್ಮ ಪುರ್ವಜರು ವಾರ ಬಿಡುವ ಪದ್ದತಿ ಅನುಸರಿಸಿಕೊಂಡು ಬಂದಿದ್ದರಿಂದ ವಾರದ ಮಂಗಳವಾರ ಮತ್ತು ಶುಕ್ರವಾರ ದಿನ ಸೇರಿ ಒಟ್ಟು 4 ಮಂಗಳವಾರ, 1 ಶುಕರವಾರ ದಿನ ಇಡೀ ಗ್ರಾಮದ ರೈತರಾ್ಯರೂ ವಾರದ ಈ 5 ದಿನಗಳಂದು ಕೃಷಿ ಚಟುವಟಿಕೆ ಕೈಗೊಳ್ಳುವಂತಿಲ್ಲ, ವಾರದ ದಿನ ಎಲ್ಲರ ಮನೆಯಲ್ಲೂ ರೊಟ್ಟಿ ಮಾಡುವಂತಿಲ್ಲ, ವಗ್ಗರಣೆಯಂತೂ ಹಾಕುವಂತಿಲ್ಲ, ಮಾಂಸಾಹಾರ ಅಡುಗೆ ತಯಾರಿಸುವಂತಿಲ್ಲ, ಊರಿನಲ್ಲಿರುವ ಕಿರಾಣಿ, ಮದ್ಯದಂಗಡಿ, ಚಹಾ ಅಂಗಡಿ, ಪಾನ್ ಬೀಡಾಂಗಡಿಗಳು ಸೇರಿದಂತೆ ಹೇರ್‌ಕಟಿಂಗ್ ಅಂಗಡಿ ಸಹ ಬಾಗಿಲು ತೆರೆಯದೇ ಬಂದ್ ಮಾಡಲಾಗುವುದು. ಆಸ್ಪತ್ರೆ ಮತ್ತು ಓಷಧ ಅಂಗಡಿ ಮಾತ್ರ ಬಾಗಿಲು ತೆರೆದಿರುತ್ತವೆ. ವಾರ ಹಿಡಿದ ಪ್ರಯುಕ್ತ ವಾರದ 5 ದಿನ ಬೆಟಗೇರಿ ಗ್ರಾಮ ಸಂಪೂರ್ಣ ಬಂದ್ ಆಚರಿಸಿದಂತಿರುತ್ತದೆ ಎಂದು ಸ್ಥಳೀಯ ವಾರ ಹಿಡಿದ ಆಯೋಜನೆ ಸಮಿತಿಯ ಹಿರಿಯ ನಾಗರಿಕ ಮಾಯಪ್ಪ ಬಾಣಸಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 