ಹರಿಜಾತ್ರೆ ಮಹೋತ್ಸವದ ಅಂಗವಾಗಿ ಆ. 20ರಂದು ವಿವಿಧ ಕಾರ್ಯಕ್ರಮ

ಹರಿಜಾತ್ರೆ ಮಹೋತ್ಸವದ ಅಂಗವಾಗಿ ಆ. 20ರಂದು ವಿವಿಧ ಕಾರ್ಯಕ್ರಮ Various programmes to mark Harijatre Festival on August 20

ಗದಗ, ಆ. 19: ನಗರದ ಗ್ರಾಮದೇವತೆಗಳಾದ ಶ್ರೀ ದ್ಯಾಮಮ್ಮ ಹಾಗೂ ಶ್ರೀ ದುರ್ಗಮ್ಮ ದೇವಿಯ ಹರಿಜಾತ್ರೆ ಮಹೋತ್ಸವವು ಪ್ರತಿ 12 ವರ್ಷಕ್ಕೊಮ್ಮೆ ನಡೆಯುತ್ತಿದ್ದು, ಈ ಬಾರಿ ಜಾತ್ರಾ ಮಹೋತ್ಸವದ ಅಂಗವಾಗಿ ಆ. 20ರಂದು ಸಂಜೆ 7 ಗಂಟೆಗೆ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಗದುಗಿನ ಬೃಹನ್ಮಠದ ಪೂಜ್ಯಶ್ರೀ ಜ. ಸದಾಶಿವಾನಂದ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಟ್ರಸ್ಟ್ ಕಮಿಟಿಯ ಅಧ್ಯಕ್ಷ ಕೊಟ್ರಪ್ಪ ಕಮತರ ಅಧ್ಯಕ್ಷತೆ ವಹಿಸುವರು. ಜಾತ್ರಾ ಕಮಿಟಿ ಕಾರ್ಯಾಧ್ಯಕ್ಷ ಫಕ್ಕೀರಪ್ಪ ಹೆಬಸೂರ ಉಪಸ್ಥಿತರಿರುವರು.

ಮುಖ್ಯ ಅತಿಥಿಗಳಾಗಿ ಸಾಮಾಜಿಕ ಕಾರ್ಯಕರ್ತ ಮಹೇಶ ದಾಸರ, ಗಣ್ಯ ವ್ಯಾಪಾರಸ್ಥ ಶರಣಪ್ಪ ಸಾಸನೂರ, ಯುವ ಧುರೀಣ ಸಂಗಮೇಶ ಕವಳಿಕಾಯಿ, ಉದ್ಯಮದಾರ ಸಾಗರ ಪವಾರ ಹಾಗೂ ಗಣ್ಯ ವ್ಯಾಪಾರಸ್ಥ ಪಕೀರಸಾ ಬಾಂಡಗೆ ಪಾಲ್ಗೊಳ್ಳುವರು.

ಅತಿಥಿಗಳಾಗಿ ನಗರಸಭೆ ಸದಸ್ಯರಾದ ಶ್ರೀಮತಿ ಶ್ವೇತಾ ದಂಡಿನ, ಶ್ರೀಮತಿ ವಿಜಯಲಕ್ಷ್ಮಿ ದಿಂಡೂರ, ಗೂಳಪ್ಪ ಮುಷಿಗೇರಿ, ಪ್ರಕಾಶ ಅಂಗಡಿ, ಚಂದ್ರಶೇಖರ ತಡಸದ ಹಾಗೂ ಜಾತ್ರಾ ಕಮಿಟಿ ಕಾರ್ಯದರ್ಶಿ ಗಂಗಾಧರ ಮೇಲಗಿರಿ ಉಪಸ್ಥಿತರಿರುವರು.

ಸಭಾ ಕಾರ್ಯಕ್ರಮದ ಬಳಿಕ ರಾತ್ರಿ 8.30ಕ್ಕೆ ಡೋಣಿಯ ನಿಂಗಪ್ಪ ಗುಡ್ಡದ ಅವರಿಂದ ಡೊಳ್ಳಿನ ಪದ ಹಾಗೂ ರಾಮದುರ್ಗದ ತಂಡದಿಂದ ಜುಗಲಬಂದಿ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ದ್ಯಾಮವ್ವ ಮತ್ತು ಶ್ರೀ ದುರ್ಗಮ್ಮ ದೇವಿಯರ ಹರಿಜಾತ್ರೋತ್ಸವ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.