ರಾಯಬಾಗ

ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನ

ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನ

ರಾಯಬಾಗ 29;   ವಿಶ್ವಕರ್ಮ ಮಂದಿರದ ವಾಸ್ತುಶಾಂತಿ, ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣದ ಅಂಗವಾಗಿ ಡಿಸೆಂಬರ್ 1ರಿಂದ 3ರವರೆಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ವಿಶೇಷ ಪೂಜಾ ವಿಧಿವಿಧಾನಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುಂಡಲೀಕ ಮುರಳಿಧರ ಸುತಾರ ಹೇಳಿದರು. ನಸಲಾಪುರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಿಥಿಗಳಾಗಿ ಯಾದಗಿರಿಯ ಏಕದಂಡಗಿಮಠದ ಆನೇಗುಂದಿ ಸಂಸ್ಥಾನ ಮಠದ ಸರಸ್ವತಿ ಪೀಠಾದೀಶ ಕುಮಾರ ಮಹಾಸ್ವಾಮೀಜಿಗಳು, ನೇಜ್   ವಿಶ್ವಕರ್ಮ ಪುಣ್ಯಾಶ್ರಮದ ಗೋಪಾಲ ಮಹಾರುದ್ರ​‍್ಪ ಸೋನಾರ, ಹುಬ್ಬಳ್ಳಿಯ ಗುರುವಿನ ಮಠದ ಮುಕುಂದ ಆಚಾರ್ಯ ಸಾನಿಧ್ಯದಲ್ಲಿ ಎಲ್ಲ ಕಾರ್ಯಕ್ರಮಗಳು ಜರುಗಲಿವೆ ಎಂದರು. ಕಾರ್ಯಕ್ರಮದ ಅಂಗವಾಗಿ ಡಿಸೆಂಬರ್ 1ರಂದು ಮಂಗಳವಾರ ಬೆಳಿಗ್ಗೆ 8 ಗಂಟೆಯಿಂದ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು, ವಾಸ್ತುಶಾಂತಿ ಸೇರಿದಂತೆ ಧಾರ್ಮಿಕ ವಿಧಿವಿಧಾನಗಳು ಜರುಗಲಿವೆ. ಸಂಜೆ ಗಣಪತಿ ಹಾಗೂ ವಿಶ್ವಕರ್ಮ ದೇವರ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ರಾತ್ರಿ 7 ಗಂಟೆಗೆ ಪ್ರವಚನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಡಿಸೆಂಬರ್ 2ರಂದು ಬುಧವಾರ ಧ್ವಜಾರೋಹಣ ಹಾಗೂ ಕಳಸಾರೋಹಣ ಕಾರ್ಯಕ್ರಮಗಳು ನಡೆಯಲಿವೆ. ಈ ದಿನ ಗಣಪತಿ ಹೋಮ, ವಾಸ್ತು ಹೋಮ, ನವಗ್ರಹ ಹೋಮ ಸೇರಿದಂತೆ ವಿವಿಧ ಹೋಮ-ಹವನ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಗುವುದು. ಸಂಜೆ 7 ಗಂಟೆಗೆ ಪ್ರವಚನ ಕಾರ್ಯಕ್ರಮ ಜರುಗಲಿದೆ. ಡಿಸೆಂಬರ್ 3ರಂದು ಗುರುವಾರ   ವಿಶ್ವಕರ್ಮ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸನ್ಯಾಸದ ಪ್ರಮುಖ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 10.30ರಿಂದ 11 ಗಂಟೆಯವರೆಗೆ ನಿಗದಿತ ಶುಭ ಮುಹೂರ್ತದಲ್ಲಿ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸ ಸ್ಥಾಪನೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರುಗಲಿವೆ. ಮಧ್ಯಾಹ್ನ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.ಈ ಮೂರು ದಿನಗಳ ಧಾರ್ಮಿಕ ಕಾರ್ಯಕ್ರಮಗಳಲ್ಲಿ ವಿವಿಧ ಮಠಾಧೀಶರು, ಗಣ್ಯರು, ಧಾರ್ಮಿಕ ಮುಖಂಡರು ಹಾಗೂ ವಿಶ್ವಕರ್ಮ ಸಮಾಜದ ಬಾಂಧವರು ಭಾಗವಹಿಸಲಿದ್ದಾರೆ. ಧಾರ್ಮಿಕ ಪರಂಪರೆ, ಆಧ್ಯಾತ್ಮಿಕ ಚಿಂತನೆ ಹಾಗೂ ಸಮಾಜದ ಒಗ್ಗಟ್ಟಿನ ಸಂಕೇತವಾಗಿ ನಡೆಯಲಿರುವ ಈ ಮಹೋತ್ಸವಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ ಎಂದರು. 


ಸುದ್ದಿ ಓದಿ