ಸುನೀಲ ಬಿರಾದಾರ ಗೆ ವೀರ ಕನ್ನಡಿಗ ಪ್ರಶಸ್ತಿ ಗರಿ
ಲೋಕದರ್ಶನ ವರದಿ
ಇಂಡಿ 13: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಗಣನೀಯ ಹಾಗೂ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ, ವಿಜಯಪುರದ ಸಮೀಕ್ಷಾ ಅಕಾಡೆಮಿ ಹಾಗೂ ಕೋರವಾರದ ಜ್ಞಾನಾಂಜನ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಸುನಿಲ ಮಹಾಂತೇಶಗೌಡ ಬಿರಾದಾರ ಅವರಿಗೆ ಪ್ರತಿಷ್ಠಿತ ‘ವೀರ ಕನ್ನಡಿಗ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಜೀ ಕನ್ನಡ ನ್ಯೂಸ್ ವಾಹಿನಿಯ ವತಿಯಿಂದ ಇದೇ ನವೆಂಬರ್ 17 ರಂದು ಬೆಂಗಳೂರಿನ ಪ್ರತಿಷ್ಠಿತ ಲಲಿತ್ ಅಶೋಕ್ ಹೋಟೆಲ್ನಲ್ಲಿ ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ, ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.
ಗ್ರಾಮೀಣ ಹಾಗೂ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತಮ ಮಾರ್ಗದರ್ಶನ ನೀಡುವ ಮೂಲಕ ಸುನಿಲ ಬಿರಾದಾರ ಅವರು ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಇವರ ಈ ಸಾಧನೆಗೆ ಸಂದ ಗೌರವಕ್ಕೆ ಸಂಸ್ಥೆಯ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು, ಪೋಷಕರು ಹಾಗೂ ವಿಜಯಪುರ ಜಿಲ್ಲೆಯ ಗಣ್ಯರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಎಂದು ಬಸವರಾಜ ನಂ ಬಾಗೇವಾಡಿ ಸಾ ಉತ್ನಾಳ ರವರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.