ಸೆ.15ರಂದು ವೀರಭದ್ರೇಶ್ವರ ಜಯಂತ್ಯೋತ್ಸವ

ಸೆ.15ರಂದು ವೀರಭದ್ರೇಶ್ವರ ಜಯಂತ್ಯೋತ್ಸವ  Veerabhadreshwara Jayanthi celebrations on September 15.

ಸೆ.15ರಂದು ವೀರಭದ್ರೇಶ್ವರ ಜಯಂತ್ಯೋತ್ಸವ  

ಶಿಗ್ಗಾವಿ, ಸೆ.13: ಶಿಗ್ಗಾವಿ ಪಟ್ಟಣದ ಶ್ರೀ ವೀರಭದ್ರೇಶ್ವರ ಮಹಾಸ್ವಾಮಿಗಳ ಜಯಂತ್ಯೋತ್ಸವವನ್ನು ಸೆ.15ರಂದು ಮಂಗಳವಾರ ಆಚರಿಸಲಾಗುವುದು.  

ಜಯಂತ್ಯೋತ್ಸವದ ಅಂಗವಾಗಿ ಬೆಳಿಗ್ಗೆ ಶ್ರೀ ವೀರಭದ್ರೇಶ್ವರ ದೇವರ ಮೂರ್ತಿಗೆ ಬಿಲ್ವಾರ್ಚನೆ, ಮಂಗಳಾರತಿ ಹಾಗೂ ಪಲ್ಲಕ್ಕಿ ಉತ್ಸವ ನೆರವೇರಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ವೀರಭದ್ರೇಶ್ವರ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಶ್ರೀ ವೀರಭದ್ರೇಶ್ವರ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.