ಸೋಗಿ 30: ವಿಜೃಂಭಣೆಯಿಂದ ನಡೆದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ
Veerabhadreshwara Swamy Chariot Festival held with great pomp
ಹೂವಿನಹಡಗಲಿ 30: ವೀರಣ್ಣ ದೊರೆಯೇ ನಿನಗಾರು ಸರಿಯೇ.. ಸರಿ ಎಂದವರ ಹಲ್ಲು ಮುರಿಯೇ ಬಹುಪರಾಕ್ ಎನ್ನುವ ಬಹುಪರಾಕ್ ಜಯಘೋಷದ ಮಧ್ಯೆ ಆರಾಧ್ಯ ದೈವ ಸೋಗಿ ಗ್ರಾಮದ ವೀರಭದ್ರೇಶ್ವರ ಸ್ಜಾಮಿ ರಥೋತ್ಸವ ಮಂಗಳವಾರ ಸಂಜೆ 5.30ಕ್ಕೆ ಸಂಭ್ರಮ ಸಡಗರದಿಂದ ಅದ್ದೂರಿಯಾಗಿ ನಡೆಯಿತು. ದೇವಸ್ಥಾನದಿಂದ ಅಲಂಕೃತ ಪಲ್ಲಕ್ಕಿಯ ಭವ್ಯ ಮೆರವಣಿಗೆಯಲ್ಲಿ ಸಾಗಿ ಬಂದ ಸ್ವಾಮಿಯ ಉತ್ಸವ ಮೂರ್ತಿ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.ಮಹಾಮಂಗಳಾರತಿ ಬಳಿಕ ಭಕ್ತರ ಜಯಘೋಷ, ಹರ್ಷೋದ್ಘಾರದ ನಡುವೆ ರಥೋತ್ಸವ ಚಾಲನೆ ಪಡೆದುಕೊಂಡಿತು.ಸಮಾಳ, ನಂದಿಕೋಲು,ಮಂಗಳವಾದ್ಯಗಳು ಮೆರಗು ತಂದವು. ರಥ ಬೀದಿಯಲ್ಲಿ ನೆರೆದಿದ್ದ ಜನರು ರಥಕ್ಕೆ ಬಾಳೆಹಣ್ಣು ಎಸೆದು ಭಕ್ತಿಯಿಂದ ಕೈ ಮುಗಿದರು. ಇದಕ್ಕೂ ಮುನ್ನ ಜರುಗಿದ ನಿಶಾನೆ ಹರಾಜಿನಲ್ಲಿ ಮೊರಗೇರಿ ವೀರಮ್ಮ ಗೆ ?1.81,101 ರೂ. ಲಕ್ಷಕ್ಕೆ ಸ್ವಾಮಿಯ ಪಟ ಪಡೆದರು.ಸ್ಥಳೀಯ ಕಲಾವಿದರಿಂದ ಸಾಮಾಜಿಕ ನಾಟಕ ಪ್ರದರ್ಶಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 