ಹರಗಿನದೋಣಿಯಲ್ಲಿ ನೀರಿನ ಕೆರೆ ನಿರ್ಮಾಣಕ್ಕೆ ಬಿ. ನಾಗೇಂದ್ರಶಾಸಕ ಸೂಚನೆ:
Venkatesh Prasad inspected the site with the officials
ಅಧಿಕಾರಿಗಳೊಂದಿಗೆ ಸ್ಥಳ ಪರೀಶೀಲಿಸಿದ ವೆಂಕಟೇಶ್ ಪ್ರಸಾದ
ಬಳ್ಳಾರಿ 27: ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹರಗಿನದೋಣಿ ಗ್ರಾಮದಲ್ಲಿ ಕಳೆದ ಎರಡು ದಶಕಗಳಿಂದ ತೀವ್ರವಾಗಿ ಕಾಡುತ್ತಿದ್ದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ.ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಬಿ.ನಾಗೇಂದ್ರವರ ಸಹೋದರ ಹಾಗೂ ಜನಪ್ರಿಯ ಮುಖಂಡರಾದ ಬಿ.ವೆಂಕಟೇಶ್ ಪ್ರಸಾದ್ ಅವರು ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ, ಕುಡಿಯುವ ನೀರಿನ ಕೆರೆ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ಪರೀಶೀಲಿಸಿದರು.
ಗ್ರಾಮಸ್ಥರ ಸಂಕಷ್ಟವನ್ನು ಆಲಿಸಿದ ಅವರು, ನೀರಿನ ಸಮಸ್ಯೆ ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.ಶಾಸಕ ಅಭಿ ನಾಗೇಂದ್ರ ಅವರ ಮಾರ್ಗದರ್ಶನದ ಮೇರೆಗೆ ಗ್ರಾಮಕ್ಕೆ ಭೇಟಿ ನೀಡಿದ ವೆಂಕಟೇಶ್ ಪ್ರಸಾದ್, “ಗ್ರಾಮದ ಜನರು ಹಲವು ವರ್ಷಗಳಿಂದ ನೀರಿಗಾಗಿ ಪರದಾಡುತ್ತಿದ್ದಾರೆ. ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕೆರೆ ನಿರ್ಮಾಣ ಕಾರ್ಯವನ್ನು ಶೀಘ್ರ ಆರಂಭಿಸಲಾಗುವುದು” ಎಂದು ಭರವಸೆ ನೀಡಿದರು.ಸ್ಥಳ ಪರೀಶೀಲನೆ ವೇಳೆ ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ವಿವರಿಸಿದರೆ, ಅಧಿಕಾರಿಗಳು ಕೆರೆ ನಿರ್ಮಾಣಕ್ಕೆ ಅಗತ್ಯ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಈ ಯೋಜನೆ ಕಾರ್ಯರೂಪಕ್ಕೆ ಬಂದರೆ ಹರಗಿನದೋಣಿ ಗ್ರಾಮಕ್ಕೆ ಕುಡಿಯುವ ನೀರಿನ ಸಮಸ್ಯೆಯಿಂದ ಬಹುಮಟ್ಟಿಗೆ ಮುಕ್ತಿ ಸಿಗಲಿದೆ ಎನ್ನಲಾಗಿದೆ.ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 