ರನ್ನ ಬೆಳಗಲಿ ಹಿರಿಯ ಭಜನಾ ಕಲಾವಿದ ಕಲಾವಿದ ವಿಧಿವಶ
Veteran bhajana artist, passes away
ರನ್ನ ಬೆಳಗಲಿ 18: ಪಟ್ಟಣದ 80 ವರ್ಷದ ಹಿರಿಯ ಬಯಲಾಟ ಮತ್ತು ಭಜನಾ ಕಲಾವಿದರಾದ ಶಿವಪುತ್ರ್ಪ ವೀರಭದ್ರ್ಪ ಕೊಣ್ಣೂರ ಅವರು ಗುರುವಾರ ದಂದು ವಯೋ ಸಹಜ ಮರಣ ಹೊಂದಿದ್ದಾರೆ.
ಇರ್ವ ಸುಪುತ್ರರು, ಸುಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.ಇವರಿಗೆ ಬೈಲಾಟ ಮತ್ತು ಭಜನೆ ಕ್ಷೇತ್ರದಲ್ಲಿ ಸೇವೆ ಪರಿಗಣಿಸಿ ತಾಲೂಕ, ಜಿಲ್ಲಾ ಮತ್ತು ರಾಜ್ಯ ಮಟ್ಟಗಳ ಅನೇಕ ಪ್ರಶಸ್ತಿ, ಪುರಸ್ಕಾರಗಳನ್ನು ನೀಡಿ ಗೌರವಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಉಸ್ತುವಾರಿ ಸಚಿವರಾದ ಆರ್ ಬಿ ತಿಮ್ಮಾಪುರ, ಚಿತ್ರದುರ್ಗದ ಸಂಸದರಾದ ಗೋವಿಂದ ಕಾರಜೋಳ, ಬಾಗಲಕೋಟೆ ಜಿಲ್ಲೆಯ ಸಂಸದರಾದ ಪಿ ಸಿ ಗದ್ದೆಗೌಡರ, ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಶಿವಾನಂದ ಶೆಲ್ಲಿಕೇರಿ, ತಾಲೂಕ ಅಧ್ಯಕ್ಷರಾದ ರಮೇಶ ಅರಿಕೇರಿ, ವಲಯ ಅಧ್ಯಕ್ಷರಾದ ರಾಘವೇಂದ್ರ ನೀಲನ್ನವರ ಹಾಗೂ ಕರ್ನಾಟಕ ಜಾನಪದ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವಿವಿಧ ಕನ್ನಡ ಪರ ಸಂಘಟನೆಗಳು ಹಿರಿಯ ಕಲಾವಿದರಿಗೆ ಶ್ರದ್ಧಾಂಜಲಿಯನ್ನು ಕೋರಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 