ಮಹಲಿಂಗಪುರ

ಅನುಭವಿ ನಾಯಕ ಸಲೀಂ ಅಹಮದ್‌ಗೆ ಸಚಿವ ಸ್ಥಾನ ನೀಡಲಿ

ಅನುಭವಿ ನಾಯಕ ಸಲೀಂ ಅಹಮದ್‌ಗೆ ಸಚಿವ ಸ್ಥಾನ ನೀಡಲಿ

ಲೋಕದರ್ಶನ ವರದಿ 

ಮಹಾಲಿಂಗಪುರ 27: ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ರಾಜ್ಯ ರಾಜಕಾರಣದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರಸ್ತುತ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ ಹಾಗೂ ವಿಧಾನ ಪರಿಷತ್ತಿನಲ್ಲಿ ಸರ್ಕಾರದ ಮುಖ್ಯ ಸಚೇತಕರಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕದ ಹಿರಿಯ ರಾಜಕಾರಣಿ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕ ಸಲೀಂ ಅಹಮದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೂರಜ್ ಅವಟಿ ಆಗ್ರಹಿಸಿದ್ದಾರೆ. 

ಸಲೀಂ ಅಹಮದ್ ಅವರು ವಿದ್ಯಾರ್ಥಿ ದೆಸೆಯಿಂದಲೇ ರಾಜಕೀಯ ಪ್ರವೇಶಿಸಿ, ಪಕ್ಷದ ಸಂಘಟನೆಗೆ ತಳಮಟ್ಟದಿಂದ ದುಡಿದು, ವಿದ್ಯಾರ್ಥಿ ಸಂಘಟನೆ, ಯುವ ಕಾಂಗ್ರೆಸ್, ಕೆಪಿಸಿಸಿ ಹಾಗೂ ಸರ್ಕಾರದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ ಸಲೀಂ ಅಹಮದ್ ಅವರಂತಹ ಅನುಭವಿ ನಾಯಕರಿಗೆ ಸಚಿವ ಸ್ಥಾನ ನೀಡುವುದು ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೂ ಗೌರವ ನೀಡಿದಂತಾಗುತ್ತದೆ. ಅವರ ರಾಜಕೀಯ ಅನುಭವ, ಸಂಘಟನಾ ಸಾಮರ್ಥ್ಯ ಹಾಗೂ ಆಡಳಿತಾತ್ಮಕ ಜ್ಞಾನವನ್ನು ಪರಿಗಣಿಸಿ ಮುಂಬರುವ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಸಂದರ್ಭದಲ್ಲಿ ಸಲೀಂ ಅಹಮದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೂರಜ್ ಅವಟಿ ಒತ್ತಾಯಿಸಿದ್ದಾರೆ. 


ಸುದ್ದಿ ಓದಿ