ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಂಡಕ್ಕೆ ಜಯ

ಗದಗ 29:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ವತಿಯಿಂದ ಅಂತಿಮ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯವು ಭಾನುವಾರ ನಡೆಯಿತು. ನಗರದ ವಿಡಿಎಸ್ ಮೈದಾನದಲ್ಲಿ ನಡೆದ ಅಂತಿಮ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳ ನಡುವೆ ಅಂತಿಮ ಪಂದ್ಯಾವಳಿ ನಡೆಯಿತು.          

ಮೊದಲು ಬ್ಯಾಟ್ ಮಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಂಡದವರು 10 ಓವರಿಗೆ 06 ವಿಕೆಟ್ ನಷ್ಟಕ್ಕೆ 101 ರನ್ ಗಳಿಸಿ ರೋಚಕ ಜಯಗಳಿಸಿದರು. ಶಿಕ್ಷಣ ಇಲಾಖೆಯ ತಂಡದವರು 10 ಓವರಿಗೆ 03 ವಿಕೆಟ್ ನಷ್ಟಕ್ಕೆ 94 ರನ್ ಗಳಿಸಿದರು. ಅಂತಿಮ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಚಾಲನೆ ನೀಡಿದರು. ಜಿ.ಪಂ ಸಿಇಒ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಭರತ್‌.ಎಸ್ ಅವರು ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರ ನೀಡಿದರು. ಜಿ.ಪಂ ಉಪ ಕಾರ್ಯದರ್ಶಿ, ಸಿ.ಬಿ.ದೇವರಮನಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದಶಕರಾದ ಶರಣು ಗೋಗೇರಿ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ರವಿ ಗುಂಜೇಕರ ಇತರರು ಇದ್ದರು.