ಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ರಾಸಲೀಲೆಗಳ ವಿಡಿಯೋ ಬಹಿರಂಗ
Video of DGP Dr. K. Ramachandra Rao's antics exposed
ಬೆಂಗಳೂರು: ಮಲಮಗಳು ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದ್ದ ಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅವರ ರಾಸಲೀಲೆಗಳ ವಿಡಿಯೋಗಳು ಬಹಿರಂಗವಾಗಿ ಹೊಸ ಸಂಚಲನ ಮೂಡಿಸಿದೆ.
ಡಾ.ಕೆ.ರಾಮಚಂದ್ರ ರಾವ್ ಅವರು 1993 ರ ಬ್ಯಾಚ್ನ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದು,ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆ ಪ್ರಕರಣ ಭಾರೀ ಸದ್ದು ಮಾಡಿದ ಬಳಿಕ ತನಿಖೆಯಲ್ಲಿ ಪಾರದರ್ಶಕತೆಗಾಗಿ ಸರಕಾರ ಅವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿತ್ತು. 2025 ರ ಆಗಸ್ಟ್ ನಲ್ಲಿ ರಾಜ್ಯ ಸರ್ಕಾರವು ಅವರ ಕಡ್ಡಾಯ ರಜೆಯನ್ನು ಹಿಂತೆಗೆದುಕೊಂಡು ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿ ಆಗಿ ನೇಮಿಸಿತ್ತು.
ಇದೀಗ ರಾಮಚಂದ್ರ ರಾವ್ ಅವರು ಕಚೇರಿಯಲ್ಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ಕೆಲವು ವಿಡಿಯೋಗಳು ಬಹಿರಂಗವಾಗಿದೆ. ಲಭ್ಯ ಮಾಹಿತಿಯ ಪ್ರಕಾರ, ಈ ದೃಶ್ಯಾವಳಿಗಳನ್ನು ಡಿಜಿಪಿ ಕಚೇರಿಯೊಳಗೆ ರಹಸ್ಯವಾಗಿ ಸೆರೆ ಹಿಡಿಯಲಾಗಿದ್ದು,ಡಾ. ರಾವ್ ಅವರು ಅಧಿಕೃತ ಕೆಲಸದ ಅವಧಿಯಲ್ಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದನ್ನು ಸೆರೆಹಿಡಿಯಲಾಗಿದೆ ಎಂದು ಹೇಳಲಾಗಿದೆ.
ವಿಭಿನ್ನ ಸಂದರ್ಭಗಳಲ್ಲಿ ಕಚೇರಿಗೆ ಮಹಿಳೆಯರು ಭೇಟಿ ನೀಡಿದ್ದ ವೇಳೆ ಪ್ರತಿ ಬಾರಿಯೂ ಬೇರೆ ಬೇರೆ ಉಡುಗೆ ತೊಟ್ಟಿರುವ ವಿಡಿಯೋಗಳು ಬಹಿರಂಗವಾಗಿದೆ. ಪೊಲೀಸ್ ಸಮವಸ್ತ್ರ ತೊಟ್ಟಿರುವಾಗಲೂ ರಾಮಚಂದ್ರ ರಾವ್ ತಬ್ಬಿಕೊಂಡು ಮುತ್ತಿಕ್ಕುತ್ತಿರುವುದನ್ನು ಕಾಣಬಹುದಾಗಿದೆ.
ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಳ್ಳುವ ಮೊದಲೇ ಈ ವಿಡಿಯೋ ಗಳನ್ನು ಸೆರೆ ಹಿಡಿಯಲಾಗಿತ್ತು ಎಂದೂ ಹೇಳಲಾಗುತ್ತಿದೆ. ಉನ್ನತ ಮಟ್ಟದ ಅಧಿಕಾರಿಯ ಮೇಲೆ ಮತ್ತೊಮ್ಮೆ ಗಂಭೀರ ಹಗರಣದ ಆರೋಪ ಕೇಳಿಬಂದಿದ್ದು, ಸದ್ಯ ಸರಕಾರ ಈ ಬಗ್ಗೆ ಯಾವ ಕ್ರಮ ಕೈಗೊಳ್ಳುತ್ತದೆ ಎನ್ನುವುದನ್ನು ನಿರೀಕ್ಷಿಸಲಾಗುತ್ತಿದೆ.
ತಪ್ಪು ಮಾಡಿದ್ರೆ ಶಿಸ್ತು ಕ್ರಮ: ಸಿಎಂ
ಬೆಳಗಾವಿ: ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ''ವಿಚಾರಣೆ ಮಾಡಿಸುತ್ತೇವೆ, ತಪ್ಪು ಮಾಡಿದ್ದು ಹೌದಾದಲ್ಲಿ ಶಿಸ್ತು ಕ್ರಮ ಕೈಗೊಳ್ಳುತ್ತೇವೆ'' ಎಂದು ಹೇಳಿದ್ದಾರೆ.
ಖಾನಾಪುರ ತಾಲೂಕಿನ ನಂದಗಡದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ'ವಿಷಯ ಬೆಳಗ್ಗೆ ಗೊತ್ತಾಗಿದೆ, ವಿಚಾರಣೆ ಮಾಡಿಸುತ್ತೇವೆ. ತಪ್ಪು ಮಾಡಿದ್ದು ಹೌದಾದಲ್ಲಿ ಶಿಸ್ತು ಕ್ರಮ ಜರುಗಿಸುತ್ತೇವೆ. ಎಷ್ಟೇ ದೊಡ್ಡ ಅಧಿಕಾರಿ ಆದರೂ ಕಾನೂನಿಗಿಂತ ದೊಡ್ಡವರಲ್ಲ'' ಎಂದು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.
ಮಲಮಗಳು ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದ್ದ ಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅವರ ರಾಸಲೀಲೆಗಳ ವಿಡಿಯೋಗಳು ಬಹಿರಂಗವಾಗಿ ಹೊಸ ಸಂಚಲನ ಮೂಡಿಸಿದೆ.
ಡಾ.ಕೆ.ರಾಮಚಂದ್ರ ರಾವ್ ಅವರು 1993 ರ ಬ್ಯಾಚ್ನ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದು,ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆ ಪ್ರಕರಣ ಭಾರೀ ಸದ್ದು ಮಾಡಿದ ಬಳಿಕ ತನಿಖೆಯಲ್ಲಿ ಪಾರದರ್ಶಕತೆಗಾಗಿ ಸರಕಾರ ಅವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿತ್ತು.2025 ರ ಆಗಸ್ಟ್ ನಲ್ಲಿ ರಾಜ್ಯ ಸರ್ಕಾರವು ಅವರ ಕಡ್ಡಾಯ ರಜೆಯನ್ನು ಹಿಂತೆಗೆದುಕೊಂಡು ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿ ಆಗಿ ನೇಮಿಸಿತ್ತು.
ಇದೀಗ ರಾಮಚಂದ್ರ ರಾವ್ ಅವರು ಕಚೇರಿಯಲ್ಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ಕೆಲವು ವಿಡಿಯೋಗಳು ಬಹಿರಂಗವಾಗಿದೆ. ಲಭ್ಯ ಮಾಹಿತಿಯ ಪ್ರಕಾರ, ಈ ದೃಶ್ಯಾವಳಿಗಳನ್ನು ಡಿಜಿಪಿ ಕಚೇರಿಯೊಳಗೆ ರಹಸ್ಯವಾಗಿ ಸೆರೆ ಹಿಡಿಯಲಾಗಿದ್ದು, ಅಧಿಕೃತ ಕೆಲಸದ ಅವಧಿಯಲ್ಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 