ವಿಜಯನಗರ:ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿ ಆಚರಣೆ
ಹೊಸಪೇಟೆ(ವಿಜಯನಗರ) 04: ವಿಜಯನಗರ ಜಿಲ್ಲೆಯ ಹೊಸಪೇಟೆಯ ತಾಲೂಕು ಕಚೇರಿ ವತಿಯಿಂದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿಯನ್ನು ತಾಲೂಕು ಕಚೇರಿಯ ಆವರಣದಲ್ಲಿ ಶನಿವಾರದಂದು ಸರಳವಾಗಿ ಆಚರಿಸಲಾಯಿತು.
ತಹಶೀಲ್ದಾರ್ ವಿಶ್ವಜಿತ್ ಮೆಹತಾ ಅವರು ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಎಲ್ಲ್ಲರಿಗೂ ಜಯಂತಿಯ ಶುಭಾಷಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ್ ಅಮರನಾಥ್, ಶಿರಸ್ತೇದಾರರಾದ ಶ್ರೀಧರ್, ರಮೇಶ್, ಗ್ರಾಮ ಲೆಕ್ಕಾಧಿಕಾರಿ ಗುರುಬಸವರಾಜ ಮತ್ತು ತಾಲೂಕು ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.