ವಿಜಯಪುರ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲಾ ಟಾಸ್ಕಫೋರ್ಸ ಸಮಿತಿ ಸಭೆ
ಲೋಕದರ್ಶನ ವರದಿ
ವಿಜಯಪುರ 21: ಜಿಲ್ಲೆಯಲ್ಲಿ ಬೆಳೆಯುತ್ತಿರುವ ಉತ್ತಮ ಗುಣಮಟ್ಟದ ಬಿಳಿ ಜೋಳಕ್ಕೆ ( ಮಾಲ್ದಂಡಿ) ಪ್ರೋತ್ಸಾಹಿಸಲು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬೆಂಬಲ ಬೆಲೆ ಹೆಚ್ಚಿಸುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಿಳಿ ಜೋಳ ಖರೀದಿ ಪ್ರಕ್ರಿಯೆ ಕುರಿತಂತೆ ನಡೆದ ಜಿಲ್ಲಾ ಟಾಸ್ಕಫೋರ್ಸ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ,ಪ್ರಸ್ತುತ 2019-20 ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ಬಿಳಿ ಜೋಳಕ್ಕೆ ಪ್ರತಿ ಕ್ವೀಂಟಲ್ಗೆ 2570 ನಿಗದಿ ಪಡೆಸಿದ್ದು, ಇದು ಅತ್ಯಂತ ಕಡಿಮೆ ಬೆಲೆಯಾದ ಹಿನ್ನಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಿಳಿ ಜೋಳಕ್ಕೆ ಬೆಂಬಲ ಬೆಲೆ ಹೆಚ್ಚಿಸುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.
ಸಭೆಯಲ್ಲಿ ಮಾರುಕಟ್ಟೆಯಲ್ಲಿ ಇರುವ ದರಕ್ಕೆ ಅನುಗುಣವಾಗಿ ಗರಿಷ್ಠ ಬೆಂಬಲ ಬೆಲೆ ನಿಗಧಿ ಪಡೆಸುವ ಅಗತ್ಯವಿದ್ದು ಮುಂದಿನ ದಿನಗಳಲ್ಲಿ ಹೆಚ್ಚನ ರೈತರು ಈ ಬೆಳೆ ಬೆಳೆಯಲು ಮುಂದೆ ಬರಲು ಅನುಕೂಲವಾಗುವಂತೆ ಸಕರ್ಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಬಿಳಿ ಜೋಳ ಖರೀದಿ ಕೇಂದ್ರಗಳ ವ್ಯವಸ್ಥೆ ಮತ್ತು ಜಿಲ್ಲೆಯ ಬಸವನ ಬಾಗೇವಾಡಿ, ಅಲಮೇಲ, ಸಿಂದಗಿ, ವಿಜಯಪುರ ಸೇರಿದಂತೆ ಸಮೀಪದ ಸ್ಥಳಗಳಲ್ಲಿ ಉಗ್ರಾಣಗಳ ವ್ಯವಸ್ಥೆಗಳನ್ನು ಪರಿಶೀಲಿಸಿ ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಭಾರಿ ಉಪ ನಿದರ್ೇಶಕಿ ಸುಲೇಖಾ ಸ್ವಾಗತಿಸಿದರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಹಾಯಕ ನಿರ್ದೇಶಕ ಶ್ರೀ ಛಗನೂರ ಅವರು ಅವಶ್ಯಕ ಮಾಹಿತಿ ನೀಡಿದರು. ಕೃಷಿ ಜಂಟಿ ನಿದರ್ೇಶಕ ಶಿವಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 