ವಿಜಯಪುರ: ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ
ಲೋಕದರ್ಶನ ವರದಿ
ವಿಜಯಪುರ 23: ಜಿಲ್ಲೆಯ ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳ 100 ಯಾಡರ್್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲೆಯಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಎಚ್ಚರಿಕೆವಿಲ್ಲದ ತಂಬಾಕು ಉತ್ಪನ್ನ ಮತ್ತು ಇ-ಸಿಗರೇಟಗಳನ್ನು ನಿಶೇಧಿಸಲಾಗಿದ್ದು ಈ ಕುರಿತು ಸೂಕ್ತ ನಿಗಾ ಇಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೋಟ್ಪಾ ಕಾಯ್ದೆ ಉಲ್ಲಂಗಿಸಿ ತಂಬಾಕು ಉತ್ಪನ್ನ ಮಾರಾಟ ವಾಗದಂತೆ ಎಚ್ಚರ ವಹಿಸಬೇಕು. ಈ ಕಾಯ್ದೆಯಡಿ ಉನ್ನತ ಅನುಷ್ಟಾನಕ್ಕಾಗಿ ಆಯ್ಕೆಯಾದ ಸಿಂದಗಿ ಮತ್ತು ವಿಜಯಪುರ ತಂಬಾಕು ಮುಕ್ತವನ್ನಾಗಿಸಲು ಪ್ರಯತ್ನಿಸಬೇಕು, ಹೆಚ್ಚು ತಂಬಾಕು ಸೇವನೆ ಇರುವ ಪ್ರದೇಶ, ತಾಲೂಕುಗಳನ್ನು ಗುರುತಿಸಿ ಅರಿವು ಮೂಡಿಸಬೇಕು.
ತಂಬಾಕು ನಿಯಂತ್ರಣ ಘಟಕದ ನಿಯಂತ್ರಣಾಧಿಕಾರಿ ಮಹಾಂತೇಶ ಉಳ್ಳಾಗಡ್ಡಿ, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಮಲ್ಲನಗೌಡ ಬಿರಾದಾರ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 