ವಿಜಯಪುರ: ವಿಶೇಷ ಶಾಲಾ ಲಸಿಕಾ ಅಭಿಯಾನ
ಲೋಕದರ್ಶನ ವರದಿ
ವಿಜಯಪುರ 05: ಇದೇ ಡಿಸೆಂಬರ್ 11 ರಿಂದ 31ರವರೆಗೆ ಟಿಡಿ-ಡಿಪಿಟಿಯ ವಿಶೇಷ ಶಾಲಾ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಈ ಅಭಿಯಾನವನ್ನು ಯಶಸ್ವಿಯಾಗಿ ಕೈಗೊಳ್ಳುವಂತೆ ನಗರದ ಎಲ್ಲ ಬಿ.ಆರ್.ಸಿ. ಸಿ.ಆರ್.ಸಿ. ಹಾಗೂ ಶಾಲಾ ಶಿಕ್ಷಕರಿಗೆ ಎಸ್.ಎಂ.ಓ. ಡಾ.ಮುಕುಂದ ಗಲಗಲಿ ಕರೆ ನೀಡಿದರು.
ನಗರದ ಟಕ್ಕೆಯಲ್ಲಿರುವ ಬಿ.ಡಿ.ಜತ್ತಿ ಹಿಂದಿ ಬಿಎಡ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಗರದ ಎಲ್ಲ ಬಿಆರ್ಸಿ-ಸಿಆರ್ಸಿಗಳಿಗೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಶಿಕ್ಷಕರಿಗೆ ಹಮ್ಮಿಕೊಂಡ ವಿಶೇಷ ಶಾಲಾ ಲಸಿಕಾ ಅಭಿಯಾನದ ಕಾಯರ್ಾಗಾರದಲ್ಲಿ ಮಾತನಾಡಿದರು.
ಇದೇ ಡಿಸೆಂಬರ್ 11 ರಿಂದ 31ರವರೆಗೆ ಕೈಗೊಂಡ ವಿಶೇಷ ಶಾಲಾ ಲಸಿಕಾ ಅಭಿಯಾನದಲ್ಲಿ ಎಲ್ಲ ಬಿಆರ್ಸಿ,ಸಿಆರ್ಸಿ ಹಾಗೂ ಶಿಕ್ಷಕರು ಸಕ್ರೀಯವಾಗಿ ಭಾಗವಹಿಸಿ ಯಶಸ್ವಿಯಾಗಿ ಅಭಿಯಾನವನ್ನು ಕೈಗೊಳ್ಳಬೇಕು. 1ನೇ ತರಗತಿ ಮಕ್ಕಳಿಗೆ ಡಿಪಿಟಿ ಲಸಿಕೆ ಹಾಗೂ 2 ರಿಂದ 10ನೇ ತರಗತಿ ಮಕ್ಕಳಿಗೆ ಟಿಡಿ ಲಸಿಕೆ ತಪ್ಪದೇ ಹಾಕಿಸಬೇಕು. ಮಕ್ಕಳಿಗೆ ಮಾರಣಾಂತಿಕವಾದ ಡಿಪ್ತೀರಿಯಾ (ಗಂಟಲುಮಾರಿ) ರೋಗವನ್ನು ತಡೆಗಟ್ಟಲು ತಪ್ಪದೇ ಲಸಿಕೆ ಹಾಕಿಸಬೇಕು. ಪ್ರತಿ ಶಾಲೆಯಲ್ಲಿ ಓರ್ವ ಶಿಕ್ಷಕರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಬೇಕು. ಪ್ರತಿ ಶಾಲೆಯಲ್ಲಿ ಪಾಲಕರ ಸಭೆ ನಡೆಸಿ ಈ ಅಭಿಯಾನದ ಕುರಿತು ಜಾಗೃತಿ ಮೂಡಿಸಿ, ಮಕ್ಕಳಿಗೆ ಲಸಿಕೆ ಹಾಕಿಸಲು ಪಾಲಕರಲ್ಲಿ ತಿಳುವಳಿಕೆ ಮೂಡಿಸಬೇಕು. ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಗಳನ್ನು ಕೊಡಿಸುವುದು ಪೋಷಕರ ಕರ್ತವ್ಯವಾಗಿದೆ ಎಂದು ಹೇಳಿದರು.
ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾ.ಕವಿತಾ ಮಾತನಾಡಿ, ಡಿಪ್ತೀರಿಯಾ(ಗಂಟಲುಮಾರಿ) ರೋಗಮುಕ್ತ ತಾಲೂಕನ್ನಾಗಿ ಮಾಡಲು ಎಲ್ಲರೂ ಕೈ ಜೋಡಿಸಬೇಕು. ವಿಶೇಷವಾಗಿ ಪಾಲಕರು ತಮ್ಮ ಮಗು ಓದುತ್ತಿರುವ ಶಾಲೆಗಳಿಗೆ ಭೇಟಿ ನೀಡಿ ಲಸಿಕಾ ದಿನಾಂಕವನ್ನು ಖಚಿತಪಡಿಸಿಕೊಂದು ಲಸಿಕಾ ದಿನದಂದು ಖುದ್ದಾಗಿ ಭಾಗವಹಿಸಿ ತಮ್ಮ ಮಕ್ಕಳಿಗೆ ಲಸಿಕೆ ಕೊಡಿಸುವುದರ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಅವರು ಕರೆ ನೀಡಿದರು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವೈದ್ಯಾಧಿಕಾರಿಗಳು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ಆರೋಗ್ಯ ಸಿಬ್ಬಂದಿ, ಆಶಾ, ಅಂಗನವಾಢಿ ಕಾರ್ಯಕರ್ತೆಯರ ಅಥವಾ 104 ಆರೋಗ್ಯ ಸಹಾಯವಾಣಿಗೆ ಸಂಪರ್ಕಿಸಬಹುದಾಗಿದೆ
ಬಿ.ಡಿ. ಜತ್ತಿ ಹಿಂದಿ ಬಿಎಡ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಕಾರ್ಯಾಗಾರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹತ್ತಹಳ್ಳಿ ಅಧ್ಯಕ್ಷತೆ ವಹಿಸಿದ್ರು. ಎಸ್.ಎಸ್.ಚಟ್ಟೇರ ಸೇರಿದಂತೆ ಎಲ್ಲ ಬಿಆರ್ಸಿ-ಸಿಆರ್ಸಿ, ಶಿಕ್ಷಕರು ಉಪಸ್ಥಿತರಿದ್ದರು. ಮಂಜುನಾಥ ಗಲಗಲಿ ವಂದಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 