ಇಂದಿನಿಂದ ವಿಜಯಪುರ- ಬಬಲೇಶ್ವರ ಸಾರಿಗೆ ಬಸ್ಸು ಸೇವೆ ಪ್ರಾರಂಭ
Vijayapura-Babaleshwar transport bus service starts from today
ವಿಜಯಪುರ 25: ಮಂಗಳವಾರದಿಂದ ವಿಜಯಪುರ- ಬಬಲೇಶ್ವರ ಮತ್ತು ಬಬಲೇಶ್ವರ- ವಿಜಯಪುರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭವಾಗಲಿದೆ .ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಸೂಚನೆ ಮೇರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಪ್ರತಿದಿನ ಸಾರಿಗೆ ಎರಡು ಬಸ್ಸುಗಳನ್ನು ಈ ಮಾರ್ಗದಲ್ಲಿ ಓಡಿಸಲಿದೆ.
ಒಂದು ಬಸ್ಸು ವಿಜಯಪುರ- ಖತಿಜಾಪುರ- ಸಾರವಾಡ ಮಾರ್ಗವಾಗಿ ಬಬಲೇಶ್ವರಕ್ಕೆ ಸಂಚರಿಸಿದರೆ ಮತ್ತೋಂದು ಬಸ್ಸು ಬಬಲೇಶ್ವರ- ಸಾರವಾಡ- ಖತಿಜಾಪುರ ಮಾರ್ಗವಾಗಿ ವಿಜಯಪುರಕ್ಕೆ ಸಂಚರಿಸಲಿದೆ. ಪ್ರತಿದಿನ ಎರಡೂ ಬಸ್ಸುಗಳು ತಲಾ ಎಂಟು ಬಾರಿ ಈ ಮಾರ್ಗದಲ್ಲಿ ಸಂಚಾರ ನಡೆಸಲಿವೆ.ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ತಮ್ಮ ಶಾಲೆ, ಕಾಲೇಜುಗಳು ಮತ್ತು ದೈನದಿಂದ ಚಟುವಟಿಕೆಗಳ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯ ಬಸ್ಸುಗಳನ್ನು ನಿಲುಗಡೆ ಮಾಡಬೇಕು ಎಂದು ಸಚಿವರಿಗೆ ಮನವಿ ಮಾಡಿದ್ದರು.
ಅಲ್ಲದೇ, ಈ ಮಾರ್ಗವಾಗಿ ಸಂಚರಿಸುವ ಇನ್ನುಳಿದ ಬಸ್ಸುಗಳನ್ನು ಸಾರವಾಡ ಗ್ರಾಮದಲ್ಲಿ ನಿಲುಗಡೆ ಮಾಡುವ ನಿಟ್ಟಿನಲ್ಲಿಯೂ ಸೂಕ್ತ ಕ್ರಮ ಕೈಗೊಳ್ಳವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 