ತಾಳಿಕೋಟಿ

ವಿಕಾಸ ಪಬ್ಲಿಕ್ ಶಾಲೆಗೆ ಶೇ.100 ರಷ್ಟು ಫಲಿತಾಂಶ

ವಿಕಾಸ ಪಬ್ಲಿಕ್ ಶಾಲೆಗೆ ಶೇ.100 ರಷ್ಟು ಫಲಿತಾಂಶ

ತಾಳಿಕೋಟಿ 17 :  ಪಟ್ಟಣದ ವಿಕಾಸ್ ಎಜುಕೇಶನ್ ಟ್ರಸ್ಟ್‌ ಅಡಿಯಲ್ಲಿ ನಡೆಯುತ್ತಿರುವ ವಿಕಾಸ್ ಪಬ್ಲಿಕ್ ಶಾಲೆಗೆ 2025-26 ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಬಂದಿದೆ. ಈ ಬಾರಿ ಪರೀಕ್ಷೆಗೆ ಹಾಜರದ 29 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದಾರೆ.

ಇದರಲ್ಲಿ 17 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 11 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ ಒಬ್ಬ ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿ ಶ್ರೇಯಾ ಬಡಿಗೇರ ಮರು ಮೌಲ್ಯಮಾಪನದಲ್ಲಿ 625ಕ್ಕೆ 611 ಅಂಕ (ಮೊದಲು 610 ಅಂಕ) ಶೇ.97.76 ಪಡೆದು ಶಾಲೆಗೆ ಪ್ರಥಮ ಸ್ಥಾನ. ಕುಮಾರಿ ಪವಿತ್ರಾ ಮಲ್ಕಾಪೂರ ಮರು ಮೌಲ್ಯ ಮಾಪನದಲ್ಲಿ 625ಕ್ಕೆ 608 ಶೇ.97.28(ಮೊದಲು 598 ಅಂಕ) ಪಡೆದು ಶಾಲೆಗೆ ದ್ವಿತೀಯ ಸ್ಥಾನ. ಕುಮಾರಿ ಭಾಗ್ಯಶ್ರೀ ಗುರಜಲಕರ್ 625ಕ್ಕೆ 592 ಅಂಕ ಶೇ.94.72 ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ.  

ಅಭಿನಂದನೆ: ವಿದ್ಯಾರ್ಥಿನೀಯರ ಈ ಅಮೋಘ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಪಾದ್ಯಾಯರು, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದೆ. 


ಸುದ್ದಿ ಓದಿ