ಗ್ರಾಮದೇವತೆ ಜಾತ್ರಾ ಮಹೋತ್ಸವ
Village Deity's Fair and Festival
ತಾಳಿಕೋಟಿ 19: ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯಲಿರುವ ದ್ಯಾಮವ್ವ ತಾಯಿಯ ಜಾತ್ರಾ ಮಹೋತ್ಸವವು ಜುಲೈ 17ರಿಂದ ಆರಂಭವಾಗಿದ್ದು, ಜಾತ್ರೆಯ ಎರಡನೇ ದಿನವಾದ ಶನಿವಾರದಂದು ದುರ್ಗಾದೇವಿ ಗೀಗಿ ಗಾಯನ ಸಂಘ ಗೋಲಬಾವಿ ಮತ್ತು ಹುಲಿ ಕಾಂತೇಶ್ವರ ಹರದೇಶಿ ಗೀಗಿಪದ ಕಲಾ ಮೇಳ ಕಣದಾಳ ಇವರಿಂದ ಗೀಗಿ ಪದಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಗೀಗಿ ಪದ ಗಾಯಕರು ಸೇರಿದ ಭಕ್ತರನ್ನು ರಂಜಿಸಿದರು. ಬೆಳಿಗ್ಗೆಯಿಂದಲೇ ಸಾವಿರಾರು ಭಕ್ತರು ದ್ಯಾಮವ್ವ ತಾಯಿಯ ದರ್ಶನ ಪಡೆದರು. ಎಲ್ಲ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆಯನ್ನು ಮಾಡಲಾಗಿತ್ತು. ಬೇರೆ ಬೇರೆ ಸ್ಥಳಗಳಿಂದ ಜಾತ್ರೆಗೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಂಡು ಸಕಲ ವ್ಯವಸ್ಥೆ ಮಾಡಿದ ಜಾತ್ರಾ ಸಮಿತಿಯ ಪದಾಧಿಕಾರಿಗಳ ನಿಸ್ವಾರ್ಥ ಸೇವೆಗೆ ಭಕ್ತಾದಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 