ಕಾಡಿನಂಚಿನ ಗ್ರಾಮಕ್ಕೆ ಕಟ್ಟಿಗೆಯಿಂದ ಸೇತುವೆ ನಿರ್ಮಿಸಿಕೊಂಡ ಗ್ರಾಮಸ್ಥರು, ಕೃಷಿಕರು : ಖಾನಾಪುರ ತಾಲುಕಿನ ಅರಣ್ಯ ಪ್ರದೇಶದ ಜನರ ಅಳಲು
ಬೆಳಗಾವಿ : ಖಾನಾಪುರ ತಾಲೂಕಿನಲ್ಲಿ ಸತತವಾಗಿ ಸುರಿಯುತ್ತಿರುವ ಧಾರಕಾರ ಮಳೆಯಿಂದ ನದಿ, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿದ್ದು, ರಬಸದ ಮಳೆಯಲ್ಲಿಯೇ ಕಾಡಿನಂಚಿನ ಗ್ರಾಮದ ರೈತರು ಮತ್ತು ಗ್ರಾಮಸ್ಥರು ಸೇರಿ ಕಾಡಿನಲ್ಲಿನ ಕಟ್ಟಿಗೆಯಿಂದ ತಾವು ಸಂಚರಿಸುವ ಬಂಡೂರಿ ಹಳ್ಳಕ್ಕೆ ಸೇತುವೆಯನ್ನು ನಿರ್ಮಿಸಿಕೊಂಡಿದ್ದಾರೆ.
ಖಾನಾಪುರ ತಾಲೂಕಿನ ಕಾಡಿನಂಚಿನಲ್ಲಿ ಬರುವ ಗವಾಳಿ ಎಂಬ ಗ್ರಾಮದ ಬಳಿ ಹರಿಯುವ ಬಂಡೂರಿ ಈ ಹಳ್ಳದಲ್ಲಿ ನೀರು ತುಂಬಿಕೊಂಡು ಹರಿಯುತ್ತಿದ್ದು, ಧಾರಕಾರ ಮಳೆಯ ನಡುವೆಯೇ ಅಲ್ಲಿನ ರೈತರು ಹಾಗೂ ಗ್ರಾಮಸ್ಥರು ಸೇರಿ ಕಟ್ಟಿಗೆಯಿಂದ ತಾವು ಸಂಚರಿಸಲು ಸೇತುವೆಯನ್ನು ನಿರ್ಮಿಸಿಕೊಂಡಿದ್ದಾರೆ.
ರೈತರು ಹಾಗೂ ಗ್ರಾಮಸ್ಥರು ಸೇರಿ ಕಟ್ಟಿಗೆಯಿಂದ ಸೇತುವೆ ನಿರ್ಮಿಸಿಕೊಳ್ಳುತ್ತಿರುವ ಬಗ್ಗೆ ಖಾನಾಪುರದ ಬಿಜೆಪಿ ನಾಯಕಿ ಸೋನಾಲಿ ಸರ್ನೋಬತ್ ಅವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಅಪ್ಲೋಡ್ ಮಾಡಿದ್ದಾರೆ.
ಖಾನಾಪುರ ಶಾಲಾ-ಕಾಲೇಜುಗಳಿಗೆ ಇಂದು ಸಹ ರಜೆ ಘೋಷಿಸಿದ ಜಿಲ್ಲಾಧಿಕಾರಿ :
ಬೆಳಗಾವಿ : ಖಾನಾಪುರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣಕ್ಕೆ ಮಂಗಳವಾರ (ಜುಲೈ 25ರಂದು) ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳು ಮತ್ತು ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.