ಬೆಳಗಾವಿ

ಬೆಳಗಾವಿ ಅತವಾಡದಲ್ಲಿ ಗ್ರಾಮಸ್ಥರ ಸಭೆ: ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ

ಬೆಳಗಾವಿ ಅತವಾಡದಲ್ಲಿ ಗ್ರಾಮಸ್ಥರ ಸಭೆ: ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ



ಬೆಳಗಾವಿ 06 : ಗ್ರಾಮೀಣ ಕ್ಷೇತ್ರದ ಅತವಾಡ ಗ್ರಾಮದಲ್ಲಿ ಸೋಮವಾರ ಸಂಜೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಸರ್ವ ಪಕ್ಷಗಳ ಮುಖಂಡರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಬಹಿರಂಗ ಸಭೆ ನಡೆಸಿ, ಗ್ರಾಮದ ಸಮಗ್ರ ಪ್ರಗತಿ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಮಹತ್ವದ ಸಮಾಲೋಚನೆ ನಡೆಸಿದರು.

ಗ್ರಾಮದ ಅಭಿವೃದ್ಧಿಗಾಗಿ ಈಗಾಗಲೇ ಕೈಗೊಂಡಿರುವ ವಿವಿಧ ಕಾಮಗಾರಿಗಳ ಪ್ರಗತಿಯನ್ನು ಪರೀಶೀಲಿಸಿದ ಅವರು, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಗ್ರಾಮಸ್ಥರೊಂದಿಗೆ ಕೂಲಂಕಷವಾಗಿ ಚರ್ಚಿಸಿದರು. ರಸ್ತೆ, ಕುಡಿಯುವ ನೀರು, ಚರಂಡಿ, ವಿದ್ಯುತ್, ಸ್ವಚ್ಛತೆ, ಉದ್ಯೋಗಾವಕಾಶಗಳು ಹಾಗೂ ಮೂಲಸೌಕರ್ಯಗಳ ಸುಧಾರಣೆ ಸೇರಿದಂತೆ ಗ್ರಾಮದ ಅಗತ್ಯಗಳಿಗೆ ಸಂಬಂಧಿಸಿದ ಹಲವು ವಿಷಯಗಳು ಸಭೆಯಲ್ಲಿ ಚರ್ಚೆಗೆ ಬಂದವು.  

ಗ್ರಾಮಸ್ಥರಿಂದ ಬಂದ ಪ್ರತಿಯೊಂದು ಸಲಹೆ ಮತ್ತು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು. ಗ್ರಾಮದ ಸಮಗ್ರ ಅಭಿವೃದ್ಧಿಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.  


ಸುದ್ದಿ ಓದಿ