ದೇಶಸೇವೆಗೆ ಹೊರಟ ಯುವಕನಿಗೆ ಗ್ರಾಮಸ್ಥರ ಗೌರವ
Villagers pay tribute to young man who left for national service
ಕುಂದಗೋಳ 28: ತಾಲೂಕಿನ ಯರೇಬೂದಿಹಾಳ ಗ್ರಾಮದ ಕಾರ್ತಿಕ ಈಶ್ವರ್ಪ ನಾಯ್ಕರ ಅವರು ಅಗ್ನಿವೀರ ನೇಮಕಾತಿಯ ಎಲ್ಲ ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಭಾರತೀಯ ಸೇನೆಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅವರಿಗೆ ಸನ್ಮಾನಿಸಿ ಅಭಿನಂದಿಸಿದರು.
ಶನಿವಾರ ರಾತ್ರಿ ಗ್ರಾಮದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಸೈನಿಕ ಮೌಲಾಸಾಬ್ ಸುಂಕದ ಅವರ ನೇತೃತ್ವದಲ್ಲಿ ಕಾರ್ತಿಕ ಅವರಿಗೆ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಪಂಚಾಕ್ಷರಿ ಪೂಜಾರ ಮಾತನಾಡಿ, "ನಮ್ಮ ಗ್ರಾಮದ ಯುವಕ ಸೈನ್ಯಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ. ಇನ್ನಷ್ಟು ಯುವಕರು ವಿವಿಧ ಉನ್ನತ ಹುದ್ದೆಗಳಿಗೆ ಆಯ್ಕೆಯಾಗಿ ಗ್ರಾಮದ ಕೀರ್ತಿಯನ್ನು ಹೆಚ್ಚಿಸಲಿ" ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಬಸವೇಶ್ವರ ಟ್ರಸ್ಟ್ ಸಮಿತಿಯ ಅಧ್ಯಕ್ಷ ಮಾದೇವಪ್ಪ ಪೂಜಾರ, ಮುಡಿಯಣ್ಣವರ ಸರ್, ಪರಮೇಶ್ವರ್ಪ ಕಾರಡಗಿ, ಚನ್ನಪ್ಪ ಮಣಕಟ್ಟಿ, ಮುತ್ತಣ್ಣ ಬಳಿಗಾರ, ಮಾಜಿ ಸೈನಿಕ ಮೌಲಾಸಾಬ್ ಸುಂಕದ ಹಾಗೂ ಗ್ರಾಮದ ಹಿರಿಯರು ಮತ್ತು ಯುವಕರು ಉಪಸ್ಥಿತರಿದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 