ಕಿತ್ತೂರು

ಲೋಕೋಪಯೋಗಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ಲೋಕೋಪಯೋಗಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ಚನ್ನಮ್ಮನ ಕಿತ್ತೂರು 24: ದೇಗಾಂವ, ಹೊಸೂರ,  ಶಿರಗಾಪೂರ ಗ್ರಾಮದ ರಸ್ತೆ ಕಾಮಗಾರಿ ಸ್ಥಗಿತಗೊಂಡು ವರ್ಷಗಳೆ ಕಳೆದಿವೆ ರಸ್ತೆ ಶೀಘ್ರ ಪೂರ್ಣ ಗೊಳಿಸುವುದರ ಜತೆಗೆ  ತೆಗ್ಗು ಗುಂಡಿಗಳಿಂದ ಧೂಳಿನಿಂದ ಮುಕ್ತಿ ನೀಡುವಂತೆ ಒತ್ತಾಯಿಸಿ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯ ಮುಂದೆ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. 

2021 ಮತ್ತು 22ನೇ ಸಾಲಿನಲ್ಲಿ ರೂ. 3 ಕೋಟಿ ವೆಚ್ಚದ ಗ್ರಾಮದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗಿತ್ತು. ಗುತ್ತಿಗೆದಾರರು ಕೆಲಸ ಪ್ರಾರಂಭಿಸಿ ಅರ್ಧಕ್ಕೆ ಕಾಮಗಾರಿಯನ್ನು ಬಿಟ್ಟು  ವರ್ಷಗಳೆ ಕಳೆದಿವೆ ಆದರೆ ಕಾಮಗಾರಿ ಪೂರ್ಣಗೊಳಿಸಿಲ್ಲ ಏಕೆ. ರಸ್ತೆಯಲ್ಲಿ ತೆಗ್ಗು ಗುಂಡಿಗಳು ಬಿದ್ದು ವಾಹನ ಸವಾರರು ದಿನ ನಿತ್ಯ ಬಿದ್ದು ಗಾಯಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಸಾರ್ವಜನಿಕರು, ವಿದ್ಯಾರ್ಥಿಗಳು, ಪ್ರತಿದಿನ ನರಕಯಾತನೆ ಅನುಭವಿಸುತ್ತಿದ್ದಾರೆ. ಆದರೂ ಯಾವುದೇ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸಲಾಗಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರು ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ರಸ್ತೆ ಕಾಮಗಾರಿಗೆ ತಂದಿದ ಎಲ್ಲ ವಸ್ತುಗಳನ್ನು ಗುತ್ತಿಗೆದಾರರು ವಾಪಸ್ ತೆಗೆದುಕೊಂಡು ಹೋಗಿದ್ದಾರೆ. ಕಾಮಗಾರಿ ಪೂರ್ಣಗೊಳ್ಳಲು ಇನ್ನು ಎಷ್ಟು ವರ್ಷ ಬೇಕು. ರಸ್ತೆಯೂ ಸಂಪೂರ್ಣ ಹಾಳಾಗಿದೆ. ಸಮಸ್ಯೆಯಿಂದ ಗ್ರಾಮಗಳಿಗೆ ವಾಹನಗಳು ಸಹ ಒಳ ಬರಲ್ಲು ಹಿಂಜರೆಯುತ್ತಿದ್ದಾರೆ. ಈ ಕೂಡಲೇ ಈ ರಸ್ತೆ ಕಾಮಗಾರಿ ಪೂರ್ಣಗೊಳಿಸದಿದ್ದರೆ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುತ್ತೇವೆ ಜೊತೆ ಬೆಳಗಾವಿ ಲೋಕೋಪಯೋಗಿ ಮುಖ್ಯ ಕಚೇರಿಯ ಮುಂದೆ ಧರಣಿ ಆರಂಭಿಸಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು ಗ್ರಾಮಸ್ಥರು ಎಚ್ಚರಿಕೆ ನೀಡಿದರು. 

ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸಂಜೀವ ಮಿರಜಕರ ಮಾತನಾಡಿ, ರಸ್ತೆಯ ಕುರಿತು ಗ್ರಾಮಸ್ಥರು ಹಲವಾರು ಬಾರಿ  ಗಮನಕ್ಕೆ ತಂದಿದ್ದಾರೆ. ಗುತ್ತಿಗೆದಾರರಿಗೆ ಅನೇಕ ಸಲ ಕಾಮಗಾರಿ ಆರಂಭಿಸುವಂತೆ ಹೇಳಿದರು ಕಾಮಗಾರಿ ಆರಂಭಿಸಿಲ್ಲ ಗುತ್ತಿಗೆದಾರರಿಗೆ ನೋಟಿಸ ಸಹ ನೀಡಲಾಗಿದೆ. ಬೆಳಗಾವಿ ಲೋಕೋಪಯೋಗಿ ಇಲಾಖೆ ಕಾರ್ಯಪಾಲ ಅಭಿಯಂತರರನ್ನು ನಾನೇ ಕರೆಸುತ್ತೇನೆ,  ಗ್ರಾಮಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಅವರ ಮುಂದೆ ಹೇಳಿ. 8 ದಿನಗಳಲ್ಲಿ ಕಾಮಗಾರಿಯನ್ನು ಆರಂಭಿಸುವ ಭರವಸೆಯನ್ನು ಗ್ರಾಮಸ್ಥರಿಗೆ ನೀಡಿದರು. ನಂತರ ಪ್ರತಿಭಟನೆಯನ್ನು ಕೈ ಬಿಟ್ಟರು.  

ರಮೇಶ ಉಗರಖೋಡ, ಪರಶುರಾಮ ಬೇಕವಾಡಕರ, ಮಹಾಂತೇಶ ದುಗ್ಗಾನಿ, ಬಸಯ್ಯ ಮುಪ್ಪಿನಮಠ, ಈರಣ್ಣ ಮಾರಿಹಾಳ, ಶಂಕರ ಗಳಗಿ, ಕಲ್ಲಪ್ಪ ಕಾದ್ರೋಳ್ಳಿ, ಪ್ರಕಾಶ ಕಡತನಾಳ, ರುದ್ರ​ಪ್ಪ, ಬೇಡಿಗೇರಿ, ಪಾರಿಶ್ ದೇಗುಲಹಳ್ಳಿ, ಈರಣ್ಣಗೌಡ ಪಾಟೀಲ, ರುದ್ರಪ್ಪ ಬಿದರಿ ಸೇರಿದಂತೆ ಹಲವು ಗ್ರಾಮಸ್ಥರು ಇದ್ದರು. 


ಸುದ್ದಿ ಓದಿ