ಇಂಡಿ

ನೀರಿಗಾಗಿ ಮಸಳಿ ಗ್ರಾಪಂ ಎದುರು ಗ್ರಾಮಸ್ಥರ ಪ್ರತಿಭಟನೆ

ನೀರಿಗಾಗಿ ಮಸಳಿ ಗ್ರಾಪಂ ಎದುರು ಗ್ರಾಮಸ್ಥರ ಪ್ರತಿಭಟನೆ

ಲೋಕದರ್ಶನ ವರದಿ 

ಇಂಡಿ: ತಾಲ್ಲೂಕಿನ ಮಸಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ನೀರಿಗಾಗಿ ಪರದಾಡುವಂತಾಗಿದೆ. ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಮಸಳಿ ಗ್ರಾಮದ ಐದನೇ ವಾರ್ಡಿನ ಗ್ರಾಮಸ್ಥರು ಮಸಳಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು. 

ಈ ಸಂದರ್ಭದಲ್ಲಿ ಅದೃಶ್ಯಪ್ಪ ವಾಲಿ ಮಾತನಾಡಿ, ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ.

ದೈನಂದಿನ ಬಳಕೆಗೆ ಅಗತ್ಯವಾದ ನೀರು ದೊರೆಯದೆ ಗ್ರಾಮಸ್ಥರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ ಎಂದು  ಅಳಲು ತೋಡಿಕೊಂಡರು.

ಸಂಬಂಧಿಸಿದ ಅಧಿಕಾರಿಗಳು ಗ್ರಾಮದಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು. ಗ್ರಾಮಸ್ಥರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಜನರ ಮೂಲಭೂತ ಅಗತ್ಯವಾದ ಕುಡಿಯುವ ನೀರಿನ ಸಮಸ್ಯೆಗೆ ಅಧಿಕಾರಿಗಳು ಕೂಡಲೇ ಸ್ಪಂದಿಸಿ, ಶಾಶ್ವತ ಪರಿಹಾರ ಕಲ್ಪಿಸಬೇಕು ಎಂಬುದು ಗ್ರಾಮಸ್ಥರ ಆಗ್ರಹವಾಗಿದೆ.ಸಿದ್ದಪ್ಪ ಕಂಬಾರ, ಅಪ್ಪಣ್ಣ ಕಂಬಾರ,

ರೇವಣಸಿದ್ದ ಬಾವಿಕಟ್ಟಿ, ಶಿವಾನಂದ ಗುಡಿಹಾಳ, ಚನ್ನು ಮಠಪತಿ , ರಾಜಶೇಖರ ಬಾವಿಕಟ್ಟಿ, ಬಸು ಬಾವಿಕಟ್ಟಿ, ಎಂ.ಪಿ. ಉಡಚಣ, ಎಂ.ಎಸ್. ಮಠಪತಿ, ಗಪೂರ ಮುಜಾವರ ಸೇರಿದಂತೆ ಇನ್ನಿತರರು ಇದ್ದರು

ಸುದ್ದಿ ಓದಿ