ವಿನಯ ಈರಗಾರ ರಾಜ್ಯಮಟ್ಟಕ್ಕೆ ಆಯ್ಕೆ
ಮಹಾಲಿಂಗಪುರ 11: ಬಾಗಲಕೋಟ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟಗಳಲ್ಲಿ ಮಹಾಲಿಂಗಪುರ ಸಮೀಪದ ಕೆಸರಗೊಪ್ಪ ಸರ್ಕಾರಿ ಪ್ರಾಥಮಿಕ ಶಾಲೆಯ ವಿನಯ ಪರಸಪ್ಪ ಈರಗಾರ ಇತನು 600 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ರಾಜ್ಯಮಟ್ಟಕ್ಕೆ ಆಯ್ಕೆಯಾದ ಈ ವಿದ್ಯಾರ್ಥಿಗೆ ಮುಖ್ಯೋಪಾಧ್ಯಯರು ಶಿಕ್ಷಕ ವೃಂದ ಹಾಗೂ ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಕೆಸರಗೊಪ್ಪ ಗ್ರಾಮದ ಗುರು ಹಿರಿಯರು ಮತ್ತು ಕ್ರೀಡಾಭಿಮಾನಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.