ಹೊಸಪೇಟೆ

ವಿನೋಬಾ ಭಾವೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮ

ವಿನೋಬಾ ಭಾವೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮ

ಹೊಸಪೇಟೆ,02 : ಇಂದು ಹೊಸಪೇಟೆ ನಗರದ ಚಿತ್ತವಾಡ್ಗಿಯ  ವಿನೋಬಾ ಭಾವೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಲಯ ಶಾಲಾ ಶಿಕ್ಷಣ ಇಲಾಖೆ ಹೊಸಪೇಟೆ ಇವರ ವತಿಯಿಂದ 2024-25 ಸಾಲಿನ ವಿನೋಬಾ ಭಾವೆ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಯಿತು, 

 ಮುಖ್ಯ ಅತಿಥಿಗಳಾಗಿ ಆಗಮಿಸಿದ ಹೊಸಪೇಟೆಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಹೆಚ್‌. ಎನ್‌. ಮೊಹಮ್ಮದ್ ಇಮಾಮ್ ನಿಯಾಜಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಮಕ್ಕಳ ಶಿಕ್ಷಣದ ಜೊತೆಗೆ ಪ್ರತಿಭೆಯನ್ನು ಅನಾವರಣಗೊಸಬೇಕು. ಇಂದು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಸರಕಾರ ಸಾಕಷ್ಟ ಸೌಲಭ್ಯಗಳನ್ನು ಒದಗಿಸಿದೆ ಅದನ್ನು ಮಕ್ಕಳು ಸದುಪಯೋಗ ಪಡಿಸಿಕೊಂಡು ಶಿಕ್ಷಣವನ್ನು ಪೂರ್ತಿಗೊಳಿಸಬೇಕು ಯಾವುದೇ ಕಾರಣಕ್ಕೂ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಬಾರದು. ಉತ್ತಮ ಸುಶಿಕ್ಷಕರಾಗಿ ಉತ್ತಮ ನಾಗರಿಕರಾಗಿ ರಾಜ್ಯದ ಅಭಿವೃದ್ಧಿಗೆ ಹಾಗೂ ದೇಶದ ಅಭಿವೃದ್ಧಿಗೆ ಪೂರಕವಾಗ ಬೇಕಾಗಿರುತ್ತದೆ. ಹಾಗೂ ಬೆಳೆಯುವ ಸಿರಿ ಮೊಳಕೆಯಲ್ಲಿಯೇ ಎಂಬ ನಾಣ್ಣುಡಿಯಂತೆ ಮಕ್ಕಳ ಒಳಗಿರುವ ಪ್ರತಿಭೆಯನ್ನು ಪಾಲಕರು ಪೋಷಕರು ಮತ್ತು ಶಿಕ್ಷಕರು ಗುರುತಿಸಿದಲ್ಲಿ ಮಾತ್ರ ಸಾರ್ಥಕವಾಗುತ್ತದೆ.  

ವಿಶೇಷವಾಗಿ ವಿದ್ಯಾರ್ಥಿಗಳು ಸಹ ಅನಾವಶ್ಯಕ ಸಮಯವನ್ನ ವ್ಯರ್ಥ ಮಾಡದೆ ಮೊಬೈಲ್ ಗಳಿಗೆ ಅಡಿಕ್ಟ್‌ ಆಗದೆ ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ದಿನನಿತ್ಯದ ಹವ್ಯಾಸಗಳನ್ನು ರೂಪಿಸಿಕೊಳ್ಳಬೇಕು ಆಟ ಪಾಠ ಕ್ರೀಡೆಗಳಲ್ಲಿ ಹೆಸರು ಮಾಡಿ ಜನ್ಮ ಕೊಟ್ಟ ತಂದೆ ತಾಯಿಗಳಿಗೂ ಹಾಗೂ ಪಾಲಕರಿಗೂ ಪೋಷಕರಿಗೂ ನಿದ್ದೆ ಕಳಿಸಿದ ಶಿಕ್ಷಕರಿಗೂ ಗೌರವ ತರುವಂತ ಕೆಲಸ ಮಾಡಬೇಕೆಂದು ತಿಳುವಳಿಕೆ ಹೇಳಿದರು.  ಇದೇ ಸಂಧರ್ಭದಲ್ಲಿ ಶಾಲೆಯ ಮುಖ್ಯಗುರುಗಳು ಹಾಗೂ ಎಸ್‌.ಡಿ.ಎಮ್‌.ಸಿ.ಅಧ್ಯಕ್ಷರು ವಿವಿಧ ಶಾಲೆಯ ಶಿಕ್ಷಕರು ಹಾಗೂ ಮಕ್ಕಳು ಭಾಗವಹಿಸಿದ್ದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಜಿ ಬಾಬು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ  ಕ್ಲಸ್ಟರ್ನ ಸರ್ಕಾರಿ / ಅನುದಾದ/ ಅನುದಾನ ರಹಿತ 19 ಶಾಲೆಗಳಿಂದ ಮಕ್ಕಳು ಭಾಗವಹಿಸಿ ವಿಜೇತರಾದ ಮಕ್ಕಳಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತಾಲೂಕು ಮಟ್ಟದಲ್ಲಿ ವಿಜೇತರಾದ ಮಕ್ಕಳು ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಭಾಗವಹಿಸುತ್ತಾರ.ೆ ಈ ರೀತಿಯಾಗಿ ಕಾರ್ಯಕ್ರಮದಿಂದ ಮಕ್ಕಳ ಪ್ರತಿಭೆ ಹೊರಹೊಮ್ಮಲು ಸಾಧ್ಯವಾಗುತ್ತದೆ. 

 ಸದರಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಬಸವರಾಜ್ ರಾಜ್ಯ ಪರಿಷತ್ ಸದಸ್ಯರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ,  ಶ್ರೀಧರ್, ಮುಖ್ಯ ಗುರುಗಳು ಸರ್ಕಾರಿ ಪದವಿ ಪೂರ್ವ ಕಾಲೇಜು ಚಿತ್ತವಾಡಗಿ,  ಶ್ರೀ ಜಾಕಿರ್ ಹುಸೇನ್ ಜಿಲ್ಲಾಧ್ಯಕ್ಷರು ದೈಹಿಕ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಶ್ರೀ ಶಿವಕುಮಾರ್ ಸಮನ್ವಯಾಧಿಕಾರಿಗಳು, ಬಿ ಆರ್ ಪಿ, ಗಳಾದ ಶ್ರೀ ಹನುಮೇಶ್, ಶ್ರೀಮತಿ ಟಿ.ಕೆ ರೂಪ ಶ್ರೀ ಮಹಮದ್ ಇಮ್ರಾನ್ ಸಿಆರ​‍್ಿ ಹಾಗು ಸದರಿ ಶಾಲೆಯ ಎಸ್ ಡಿ ಎಂ ಸಿ ಸಮಿತಿಯ ಸರ್ವ ಸದಸ್ಯರು ಸಾವಿರಾರು ಜನ ಪಾಲಕರು ಪೋಷಕರು  ಭಾಗವಹಿಸಿದ್ದರು 


ಸುದ್ದಿ ಓದಿ