ಉಪಾಧ್ಯಕ್ಷರಾಗಿ ವಿನೋದ ಸಿಂಪಿ ಆಯ್ಕೆ
ಮಹಾಲಿಂಗಪುರ 20: ಬಾಗಲಕೋಟ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಮಿತಿಯ ಉಪಾಧ್ಯಕ್ಷರಾಗಿ ಸ್ಥಳೀಯ ವಿನೋದ ಸಿಂಪಿ ಆಯ್ಕೆಯಾಗಿದ್ದಾರೆ.
ತಕ್ಷಣವೇ ಜಾರಿಗೆ ಬರುವಂತೆ ಹುದ್ದೆಯ ನೇಮಕಾತಿಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ ಪ್ರಸ್ತಾವನೆ ಅನುಮೋದಿಸಿರುವುದಾಗಿ ಪ್ರಿಯಾಂಕ್ ಖರ್ಗೆ ಪ್ರಕಟಣೆ ಹೊರಡಿಸಿದ್ದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅಭಿನಂದಿಸಿದ್ದಾರೆ.