ವೈರಲ್ ಜ್ವರ ಪ್ರಕರಣಗಳು ನಿಯಂತ್ರಣದಲ್ಲಿದೆ: ಡಿಹೆಚ್‌ಓ ಡಾ.ಯಲ್ಲಾ ರಮೇಶ್‌ಬಾಬು ಸ್ಪಷ್ಟನೆ
Viral fever cases under control: DHO Dr Yalla Rameshbabu clarified
ಬಳ್ಳಾರಿ 3: ವಾತಾವರಣದಲ್ಲಿ ಉಂಟಾಗುವ ಏರುಪೇರುನಿಂದ ವೈರಲ್ ಜ್ವರ ಕಂಡುಬರುವ ಸಾಧ್ಯತೆ ಇದ್ದು, ಸಾರ್ವಜನಿಕರು ಆತಂಕ ಪಡದೇ ಉಚಿತವಾಗಿ ಪರೀಕ್ಷೆ ಮತ್ತು ಚಿಕಿತ್ಸೆ ಮಾಡಿಸುವ ಮೂಲಕ ಗುಣಮುಖರಾಗಲು ಎಮ್ಮಿಗನೂರು ಹಾಗೂ ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್‌ಬಾಬು ಅವರು ತಿಳಿಸಿದರು.
ಕಂಪ್ಲಿ ತಾಲೂಕಿನ ಎಮ್ಮಿಗನೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಶಾಂತಿನಗರ ಗ್ರಾಮದಲ್ಲಿ ಕಂಡುಬಂದ ಜ್ವರ ಪ್ರಕರಣಗಳ ಮಾಹಿತಿ ಹಿನ್ನಲೆಯಲ್ಲಿ ಗುರುವಾರ ವೈದ್ಯಕೀಯ ತಂಡದೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.ಗ್ರಾಮದಲ್ಲಿ ಯಾವುದೇ ವಾಂತಿ-ಭೇದಿ ಪ್ರಕರಣಗಳು ವರದಿಯಾಗಿರುವುದಿಲ್ಲ. ಅಲ್ಲದೇ ಅಧಿಕೃತವಾಗಿ ಡೆಂಗ್ಯು ಪ್ರಕರಣಗಳು ಸಹ ವರದಿಯಾಗಿರುವುದಿಲ್ಲ. 70 ಮನೆಗಳಿರುವ ಗ್ರಾಮದಲ್ಲಿ ಮೇಲ್ನೋಟಕ್ಕೆ ವಾತಾವರಣದ ಬದಲಾವಣೆಯಿಂದಾಗುವ ವೈರಲ್ ಜ್ವರ ಕಂಡುಬಂದಿರುವ ಸಾಧ್ಯತೆಯಿದ್ದು, ಈಗಾಗಲೇ ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ಅವರ ತಂಡ ಭೇಟಿ ನೀಡಿ ಮುಂಜಾಗ್ರತೆ ವಹಿಸಲಾಗಿದೆ.
ಗ್ರಾಮದ ಸರಕಾರಿ ಶಾಲೆಯಲ್ಲಿ ತುರ್ತು ಚಿಕಿತ್ಸಾ ಕೇಂದ್ರ ಆರಂಭಿಸಲಾಗಿದ್ದು, ಅಗತ್ಯ ಓಷಧಿ, ಆಂಬ್ಯುಲೆನ್ಸ್ ಮತ್ತು ವೈದ್ಯರನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು.
ಗ್ರಾಮದಲ್ಲಿ ಕ್ಷೇತ್ರ ಸಿಬ್ಬಂದಿ ಒಳಗೊಂಡ ವೈದ್ಯಕೀಯ ತಂಡವು ಮನೆಗಳಿಗೆ ತೆರಳಿ ಲಾರ್ವಾ ಸಮೀಕ್ಷೆ ಕೈಗೊಂಡು ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡಲಾಗುತ್ತಿದೆ. ನೆಲ್ಲುಡಿ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ನೀರಿನ ಮೂಲಗಳು, ಚರಂಡಿಗಳನ್ನು ಸ್ವಚ್ಚಗೊಳಿಸಲಾಗಿದೆ. ಸಾರ್ವಜನಿಕರು ಆದಷ್ಟು ಕುದಿಸಿ ಆರಸಿ ಸೋಸಿದ ನೀರನ್ನು ಕುಡಿಯಬೇಕು. ಬಿಸಿಯಾದ ಆಹಾರ ಪದಾರ್ಥ ಸೇವಿಸಬೇಕು ಎಂದರು.ಈ ಸಂದರ್ಭದಲ್ಲಿ ನೆಲ್ಲುಡಿ ಗ್ರಾಪಂ ಸದಸ್ಯರಾದ ಪ್ರಭಾಕರ, ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ರವೀಂದ್ರ ಕನಕೇರಿ, ಆಡಳಿತ ವೈದ್ಯಾಧಿಕಾರಿ ಡಾ.ಫಾರೂಖ್ ಅಹಮ್ಮದ್, ಪ್ರಸೂತಿ ತಜ್ಞ ಡಾ.ಭರತ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಜಿಲ್ಲಾ ಎನ್‌ಸಿಡಿ ಸಲಹೆಗಾರರಾದ ಡಾ.ಜಬೀನ್ ತಾಜ್, ಜಿಲ್ಲಾ ಕಾಲರ ನಿಯಂತ್ರಣ ತಂಡದ ತಿಪ್ಪೇಸ್ವಾಮಿ, ಉಮಾ ಮಹೇಶ್ವರಿ, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಬಸವರಾಜ, ಹೆಚ್‌ಐಓ ಬಸನಗೌಡ, ವಿಜ್ಞೇಶ್ವರ, ಕೃಷ್ಣಮೂರ್ತಿ, ಚನ್ನಬವರಾಜ, ಪಿಹೆಚ್‌ಸಿಓ, ಗೀತಾ, ನಂದಾ ಸೇರಿದಂತೆ ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರುಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 