ಬೆಳಗಾವಿ

ರಾಷ್ಟ್ರೀಯ ಸಾಧನಾ ಪ್ರಶಸ್ತಿಗೆ ವಿಷ್ಣು ಕುಲಕರ್ಣಿ ಸನ್ಮಾನ

ರಾಷ್ಟ್ರೀಯ ಸಾಧನಾ ಪ್ರಶಸ್ತಿಗೆ ವಿಷ್ಣು ಕುಲಕರ್ಣಿ ಸನ್ಮಾನ


ಸಂಬರಗಿ: ತಾಂವಶಿ ಗ್ರಾಮದ ಪ್ರಗತಿಪರ ರೈತ ಹಾಗೂ ಅಥಣಿ ನ್ಯಾಯಾಲಯದ ಖ್ಯಾತ ನ್ಯಾಯವಾದಿ, ಅಥಣಿ ತಾಲೂಕಿನ ರಾಷ್ಟ್ರೀಕೃತ ಬ್ಯಾಂಕ್ಗಳ ವಿವಿಧ ಶಾಖೆಗಳ ಕಾನೂನು ಸಲಹೆಗಾರ ವಿಷ್ಣು ಗೋವಿಂದ ಕುಲಕರ್ಣಿ ಅವರಿಗೆ ವಿಜಯಪುರದಲ್ಲಿ ನಡೆದ ರಾಷ್ಟ್ರೀಯ ಸಮಾರಂಭದಲ್ಲಿ 2026ನೇ ಸಾಲಿನ ರಾಷ್ಟ್ರೀಯ ಪ್ರತಿಷ್ಠಿತ ಸಾಧನಾ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.  

ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಸಂತೋಷ್ ಕೆ. ಬೆಂಗಳೂರು ಅವರು ಪ್ರಶಸ್ತಿ ಪ್ರದಾನ ಮಾಡಿದರು.  

ಸಾಮಾಜಿಕ ಹಾಗೂ ಕಾನೂನು ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವಿಷ್ಣು ಕುಲಕರ್ಣಿ ಅವರು ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದ ತನಿಖಾ ಸಮಿತಿಗಳಲ್ಲಿ ಕಾರ್ಯನಿರ್ವಹಿಸಿದ ಬಳಿಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದೇಶದ ವಿವಿಧ ರಾಜ್ಯಗಳಲ್ಲಿ ಸಮಿತಿಯ ಕಾನೂನು ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.  

ಅವರ ಸಾಮಾಜಿಕ ಹಾಗೂ ಕಾನೂನು ಸೇವೆಯನ್ನು ಗುರುತಿಸಿ ಬೆಂಗಳೂರಿನಲ್ಲಿ ಕರ್ನಾಟಕ ಸಮಾಜ ಸೇವಾ ರತ್ನ ಪ್ರಶಸ್ತಿಯನ್ನೂ ನೀಡಿ ಗೌರವಿಸಲಾಗಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿಯ ವಿವಿಧ ರಾಜ್ಯಗಳ ಪದಾಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದು, ವಿಷ್ಣು ಕುಲಕರ್ಣಿ ಅವರನ್ನು ಅಭಿನಂದಿಸಿದರು. 


ಸುದ್ದಿ ಓದಿ